Pahalgam terror attack: 'ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ'; ಪಾಕಿಸ್ತಾನ ಬೆನ್ನಿಗೆ ನಿಂತ China

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಯ ಬಗ್ಗೆ ನಿಷ್ಪಕ್ಷಪಾತ ತನಿಖೆಯನ್ನು ಚೀನಾ ಬೆಂಬಲಿಸುತ್ತದೆ ಎಂದು ವಾಂಗ್ ತಿಳಿಸಿದ್ದಾರೆ.
China backs Pakistan amid rising tensions
ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ
Updated on

ನವದೆಹಲಿ: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಹದಗೆಟ್ಟಿರುವ ಭಾರತ ಪಾಕ್ ನಡುವಿನ ಉದ್ವಿಗ್ನತೆ ಕುರಿತು ಇದೇ ಮೊದಲ ಬಾರಿಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ತಮ್ಮ ದೇಶವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಬೆನ್ನಿಗೆ ನಿಂತಿದೆ.

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಭಾನುವಾರ ಪಾಕಿಸ್ತಾನದ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, 'ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿಯನ್ನು ತಮ್ಮ ದೇಶವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ದಾರೆ ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಯ ಬಗ್ಗೆ ನಿಷ್ಪಕ್ಷಪಾತ ತನಿಖೆಯನ್ನು ಚೀನಾ ಬೆಂಬಲಿಸುತ್ತದೆ ಎಂದು ವಾಂಗ್ ತಿಳಿಸಿದ್ದಾರೆ ಎನ್ನಲಾಗಿದೆ.

ಅಂತೆಯೇ ಭಾರತ ಮತ್ತು ಪಾಕಿಸ್ತಾನ ಎರಡೂ ಕಡೆಯವರು ಸಂಯಮವನ್ನು ಕಾಯ್ದುಕೊಳ್ಳುತ್ತಾರೆ. ಪರಸ್ಪರರ ಕಡೆಗೆ ಸಾಗುತ್ತಾರೆ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕೆಲಸ ಮಾಡುತ್ತಾರೆ ಎಂದು ಚೀನಾ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ರಾಜಕೀಯ ಬ್ಯೂರೋದ ಸದಸ್ಯರೂ ಆಗಿರುವ ವಾಂಗ್ ಅವರು ದೂರವಾಣಿ ಕರೆಯ ಸಮಯದಲ್ಲಿ ಹೇಳಿದರು.

China backs Pakistan amid rising tensions
Pahalgam terror attack ತನಿಖೆಯಲ್ಲಿ ರಷ್ಯಾ, ಚೀನಾ ಪಾಲ್ಗೊಳ್ಳಬೇಕು: ಪಾಕಿಸ್ತಾನ ಆಗ್ರಹ

ಭಯೋತ್ಪಾದನಾ ದಾಳಿಯ ನಂತರ ಎರಡು ನೆರೆಹೊರೆಯವರ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪಾಕಿಸ್ತಾನಿ ನಾಯಕ ದಾರ್ ಚೀನಾ ವಿದೇಶಾಂಗ ಸಚಿವ ವಾಂಗ್‌ ಯಿಗೆ ವಿವರಿಸಿದರು. ಈ ವೇಳೆ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಮತ್ತು ಎಲ್ಲಾ ಪಾಕಿಸ್ತಾನಿ ವೀಸಾಗಳನ್ನು ನಿಷೇಧಿಸುವುದು ಮುಂತಾದ ಕ್ರಮಗಳನ್ನು ಭಾರತ ಈಗಾಗಲೇ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡಿದೆ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಾಂಗ್ ಯೀ, 'ಭಯೋತ್ಪಾದನೆಯನ್ನು ಎದುರಿಸುವುದು ಎಲ್ಲಾ ರಾಷ್ಟ್ರಗಳ ಹಂಚಿಕೆಯ ಜವಾಬ್ದಾರಿಯಾಗಿದೆ ಮತ್ತು ಚೀನಾ ಪಾಕಿಸ್ತಾನದ ದೃಢವಾದ ಭಯೋತ್ಪಾದನಾ ನಿಗ್ರಹ ಕ್ರಮಗಳನ್ನು ನಿರಂತರವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com