ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ

ಇಲ್ಲಿಯವರೆಗೆ, ಯಾವುದೇ ಉಗ್ರ ಸಂಘಟನೆ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿಯಾದ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿ ಕಚೇರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ನಂತರ 16 ಗಾಯಾಳುಗಳನ್ನು ಆಸ್ಪತ್ರೆಗೆ ತರಲಾಯಿತು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ತಿಳಿಸಿದೆ.

ಇಲ್ಲಿಯವರೆಗೆ, ಯಾವುದೇ ಉಗ್ರ ಸಂಘಟನೆ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ.

ಸ್ಫೋಟವು ಎಷ್ಟು ತೀವ್ರವಾಗಿತ್ತು ಎಂದರೆ, ಶಾಂತಿ ಸಮಿತಿಯ ಕಚೇರಿಯ ಕಟ್ಟಡ ಸಂಪೂರ್ಣ ಧ್ವಂಸಗೊಂಡಿದೆ ಮತ್ತು ಹಲವಾರು ಜನ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಪಾಕಿಸ್ತಾನ ಮೇಲೆ ಯುದ್ಧ ಬೇಡ ಎಂದು ನಾನು ಹೇಳಿಲ್ಲ: ವರಸೆ ಬದಲಿಸಿದ ಸಿದ್ದರಾಮಯ್ಯ; ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಮಾಹಿತಿ ಪಡೆದ ನಂತರ ರಕ್ಷಣಾ ತಂಡಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಅವಶೇಷಗಳಿಂದ ಹೊರತೆಗೆಯುವ ಕಾರ್ಯಾಚರಣೆ ಪ್ರಾರಂಭಿಸಿದರು.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಸ್ಫೋಟದ ಸ್ವರೂಪ ಅಥವಾ ಉದ್ದೇಶಗಳ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಆದಾಗ್ಯೂ, ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು ಪ್ರದೇಶವನ್ನು ಸುತ್ತುವರೆದಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com