ಪಹಲ್ಗಾಮ್ ಭಯೋತ್ಪಾದಕ ದಾಳಿ: ಜವಾಬ್ದಾರಿಯುತ ಪರಿಹಾರ ಕ್ರಮ ಕೈಗೊಳ್ಳಿ; ಭಾರತ, ಪಾಕಿಸ್ತಾನಕ್ಕೆ ಅಮೆರಿಕಾ ಒತ್ತಾಯ

ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.
PM Modi with Donald Trump
ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕಾ ಬಿಕ್ಕಟ್ಟಿಗೆ "ಜವಾಬ್ದಾರಿಯುತ ನಿರ್ಣಯ" ಕೈಗೊಳ್ಳುವಂತೆ ಎರಡೂ ರಾಷ್ಟ್ರಗಳಿಗೆ ಒತ್ತಾಯಿಸಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಉಭಯ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಿ ಬಿಕ್ಕಟ್ಟಿಗೆ ಜವಾಬ್ದಾರಿಯುತ ಪರಿಹಾರ ಕಾಣಬೇಕು ಎಂದು ಅಮೆರಿಕಾ ಬಯಸುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಅಮೆರಿಕಾ ಭಾರತದ ಪರ ನಿಲ್ಲುತ್ತದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.

PM Modi with Donald Trump
'ಭಾರತ-ಪಾಕಿಸ್ತಾನ ನಡುವೆ ಕಾಶ್ಮೀರಕ್ಕಾಗಿ ಸಾವಿರ ವರ್ಷಗಳಿಂದ ಹೋರಾಟ, ಅವರು ಸಮಸ್ಯೆ ಬಗೆಹರಿಸಿಕೊಳ್ಳುತ್ತಾರೆ': ಡೊನಾಲ್ಡ್ ಟ್ರಂಪ್ ಹೇಳಿಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com