ಪಹಲ್ಗಾಮ್ ದಾಳಿಯಿಂದ ಮತ್ತಷ್ಟು ಹಳಸಿದ ಇಂಡೋ-ಪಾಕ್ ಸಂಬಂಧ: ಸಂಘರ್ಷ ಹೆಚ್ಚಿಸದಂತೆ ಉಭಯ ರಾಷ್ಟ್ರಗಳಿಗೆ ಅಮೆರಿಕಾ ಒತ್ತಾಯ

ಕಾಶ್ಮೀರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಮೆರಿಕಾ ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದೆ.
Secretary of State Marco Rubio
ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ
Updated on

ನ್ಯೂಯಾರ್ಕ್/ವಾಷಿಂಗ್ಟನ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಘಟನೆ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಈ ನಡುವಲ್ಲೇ ಸಂಘರ್ಷವನ್ನು ಹೆಚ್ಚಿಸದಂತೆ ಉಭಯ ರಾಷ್ಟ್ರಗಳಿಗೆ ಅಮೆರಿಕಾ ಒತ್ತಾಯಿಸಿದೆ.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರಕುವ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಅವರು, ಕಾಶ್ಮೀರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಮೆರಿಕಾ ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದೆ. ಪರಿಸ್ಥಿತಿ ಉಲ್ಭಣಗೊಳಿಸದಿರಿ ಎಂದು ಒತ್ತಾಯಿಸುತ್ತಿದೆ ಎಂದು ಹೇಳಿದರು.

ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಇಂದು ಅಥವಾ ನಾಳೆ ಪಾಕಿಸ್ತಾನ ಮತ್ತು ಭಾರತದ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಈ ವಿಚಾರವಾಗಿ ಇತರೆ ರಾಷ್ಟ್ರಗಳು ಹಾಗೂ ವಿದೇಶಾಂಗ ಸಚಿವರು ಮಾತುಕತೆ ನಡೆಸುವಂತೆ ಪ್ರಯತ್ನ ನಡೆಸಿದ್ದಾರೆಂದು ತಿಳಿಸಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ನಿಗ್ನತೆಯನ್ನು ಕಡಿಮೆ ಮಾಡಲು ಸಾಕಷ್ಟು ಪ್ರಯತ್ನಗಳ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಕಾರ್ಯದರ್ಶಿ ಭಾರತ ಮತ್ತು ಪಾಕಿಸ್ತಾನದಲ್ಲಿರುವ ತಮ್ಮ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಟ್ರಂಪ್ ಅವರೊಂದಿಗೆ ರುಬಿಯೋ ಮಾತುಕತೆ ನಡೆಸಿದ್ದು, ಭಾರತ ಮತ್ತು ಪಾಕಿಸ್ತಾನದೊಂದಿಗೆ ಮಾತುಕತೆ ಮೇಲೆ ಇದರ ಪ್ರಭಾವ ಇರಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Secretary of State Marco Rubio
ಪಹಲ್ಗಾಮ್ ಭಯೋತ್ಪಾದಕ ದಾಳಿ: ಜವಾಬ್ದಾರಿಯುತ ಪರಿಹಾರ ಕ್ರಮ ಕೈಗೊಳ್ಳಿ; ಭಾರತ, ಪಾಕಿಸ್ತಾನಕ್ಕೆ ಅಮೆರಿಕಾ ಒತ್ತಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com