
ನವದೆಹಲಿ: ಅಮೆರಿಕಾ ಆಮದು ಮಾಡಿಕೊಳ್ಳುವ ಭಾರತದ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ ಎಂದು ಶ್ವೇತಭವನ ಬುಧವಾರ ತಿಳಿಸಿದೆ.
ಜುಲೈ ಆರಂಭದಲ್ಲಿ ಟ್ರಂಪ್ ಭಾರತದ ಮೇಲೆ ಶೇ.25 ರಷ್ಟು ಸುಂಕ ವಿಧಿಸಿದ್ದರು, ಜೊತೆಗೆ ನವದೆಹಲಿ ರಷ್ಯಾದ ತೈಲ ಖರೀದಿಯನ್ನು ಮುಂದುವರಿಸಿದ್ದಕ್ಕಾಗಿ ಅನಿರ್ದಿಷ್ಟ ದಂಡವನ್ನು ವಿಧಿಸಿದ್ದರು. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಭಾರತ ರಷ್ಯಾವನ್ನು ಬೆಂಬಲಿಸುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.
ಟ್ರಂಪ್ ಪುನರಾವರ್ತಿತ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತ ಸೋಮವಾರ ವಾಷಿಂಗ್ಟನ್ ಮತ್ತು ಅದರ ಮಿತ್ರರಾಷ್ಟ್ರಗಳು ರಷ್ಯಾದ ತೈಲ ಆಮದುಗಳ ಮೇಲೆ "ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ" ಗುರಿಯನ್ನು ಹೊಂದಿವೆ ಎಂದು ಆರೋಪಿಸಿದೆ, ಜಾಗತಿಕ ಮಾರುಕಟ್ಟೆಗಳನ್ನು ಸ್ಥಿರಗೊಳಿಸಲು ಆ ಖರೀದಿಗಳನ್ನು ಒಮ್ಮೆ ಪ್ರೋತ್ಸಾಹಿಸಿದ್ದು ಅಮೆರಿಕವೇ ಎಂಬುದನ್ನು ಭಾರತ ನೆನಪಿಸಿದೆ.
Advertisement