
ಕೊಲಂಬೊ: "ಸರ್ಕಾರದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಶ್ರೀಲಂಕಾ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಬಂಧಿಸಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಎಎಫ್‌ಪಿಗೆ ತಿಳಿಸಿದ್ದಾರೆ.
ವಿಕ್ರಮಸಿಂಘೆ ಅವರು ದೇಶದ ಮುಖ್ಯಸ್ಥರಾಗಿದ್ದಾಗ ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023 ರಲ್ಲಿ ಲಂಡನ್‌ಗೆ ಭೇಟಿ ನೀಡಿದ್ದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನಂತರ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
76 ವರ್ಷದ ವಿಕ್ರಮಸಿಂಘೆ ಅವರನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದ್ದು, ಸರ್ಕಾರಿ ಹಣ ದುರುಪಯೋಗದ ತನಿಖೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಅವರನ್ನು ಇಲ್ಲಿಗೆ ಕರೆಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ವಿಕ್ರಮಸಿಂಘೆ ಅವರು ದೇಶದ ಮುಖ್ಯಸ್ಥರಾಗಿದ್ದಾಗ ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023 ರಲ್ಲಿ ಲಂಡನ್‌ಗೆ ಭೇಟಿ ನೀಡಲು ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ವಿಕ್ರಮಸಿಂಘೆ ಅವರು ಅಧಿಕೃತ ಕಾರ್ಯಕ್ರಮದ ನಂತರ ಅಮೆರಿಕದಿಂದ ಹಿಂತಿರುಗುತ್ತಿದ್ದರು ಮತ್ತು ಅವರ ಪತ್ನಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರದ ವೆಚ್ಚದಲ್ಲಿ ಯುಕೆಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಿಐಡಿ ಈ ಹಿಂದೆ ಅವರ ಸಿಬ್ಬಂದಿಯ ಪ್ರಯಾಣ ವೆಚ್ಚದ ಬಗ್ಗೆ ವಿಚಾರಣೆ ನಡೆಸಿತ್ತು.
ವಿಕ್ರಮಸಿಂಘೆ ಅವರು ಜುಲೈ 2022 ರಿಂದ ಸೆಪ್ಟೆಂಬರ್ 2024 ರವರೆಗೆ ಶ್ರೀಲಂಕಾ ಅಧ್ಯಕ್ಷರಾಗಿದ್ದರು. ಅನುಭವಿ ರಾಜಕಾರಣಿ ಶ್ರೀಲಂಕಾದ ಪ್ರಧಾನಿಯಾಗಿಯೂ ಆರು ಬಾರಿ ಸೇವೆ ಸಲ್ಲಿಸಿದ್ದಾರೆ.
Advertisement