

ಸ್ಥಳೀಯ ಕಾಲಮಾನ ನಿನ್ನೆ ಶನಿವಾರ ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನ ಮೇಯರ್ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಗುಂಡಿನ ದಾಳಿ ಆರಂಭವಾಗಿ ಮೂರು ಗಂಟೆಗಳ ನಂತರ, ವಿದ್ಯಾರ್ಥಿಗಳು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನಲ್ಲಿರುವ ಕ್ಯಾಂಪಸ್‌ನಲ್ಲಿರುವ ತಮ್ಮ ವಸತಿ ನಿಲಯಗಳು ಮತ್ತು ತರಗತಿ ಕೋಣೆಗಳಲ್ಲಿ ಅಡಗಿ ಕುಳಿತುಕೊಂಡು ತಮ್ಮನ್ನು ರಕ್ಷಿಸಿಕೊಂಡರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಮೇಯರ್ ಬ್ರೆಟ್ ಸ್ಮೈಲಿ ಆರಂಭದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದು, ಪೊಲೀಸರು ಕಪ್ಪು ಬಟ್ಟೆ ಧರಿಸಿದ ಶಂಕಿತ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ. ಶಂಕಿತ ದಾಳಿಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಬರಸ್ ಮತ್ತು ಹೋಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಸಗುಂಡಿನ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಎಂಟು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ನಿನ್ನೆ ಸಂಜೆ 4:22 ರ ಸುಮಾರಿಗೆ ಗುಂಡಿನ ದಾಳಿ ವರದಿಯಾಗಿದೆ.
Advertisement