

ನವದೆಹಲಿ: ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್ ನಲ್ಲಿ ಜಮಾವಣೆಯಾಗಿದ್ದ ಯಹೂದಿಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ 16 ಮಂದಿ ಮೃತಪಟ್ಟಿದ್ದು, ಈ ಘಟನೆಯನ್ನು ಭಾರತ ಖಂಡಿಸಿದೆ ಮತ್ತು ಆಸ್ಟ್ರೇಲಿಯಾಗೆ 'ಸಂಪೂರ್ಣ ಬೆಂಬಲ' ನೀಡಿದೆ.
ದಾಳಿಯ ನಂತರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರಿಗೊಂದಿಗೆ ಮಾತನಾಡಿದ್ದು, ಅಮಾಯಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
'ಆಸ್ಟ್ರೇಲಿಯಾದ ವಿದೇಶಾಂಗ ಸಚಿವಪೆನ್ನಿ ವಾಂಗ್ ಅವರೊಂದಿಗೆ ಮಾತನಾಡಿದ್ದೇನೆ. ಬೋಂಡಿ ಬೀಚ್ ಭಯೋತ್ಪಾದಕ ದಾಳಿಯ ಬಗ್ಗೆ ನಮ್ಮ ಆಳವಾದ ಸಂತಾಪ ತಿಳಿಸಿದ್ದೇವೆ ಮತ್ತು ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ' ಎಂದು ಜೈಶಂಕರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆಸ್ಟ್ರೇಲಿಯಾದ ಅಧಿಕಾರಿಗಳ ಪ್ರಕಾರ, ಭಾನುವಾರ ಇಬ್ಬರು ಬಂದೂಕುಧಾರಿಗಳು ನಡೆಸಿದ ಗುಂಡಿ ದಾಳಿಯಲ್ಲಿ ಹದಿನಾರು ಜನ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಘಟನೆಯ ನಂತರ, ಜೈಶಂಕರ್ ಅವರು ಈ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಬೋಂಡಿ ಬೀಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸುವುದಾಗಿ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಈ ದಾಳಿಯನ್ನು ದೇಶಕ್ಕೆ 'ಕರಾಳ ಕ್ಷಣ' ಎಂದು ಹೇಳಿದ್ದಾರೆ.
Advertisement