

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿ ನಂತರ ಭಾರತ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ನಂತರ ನಡೆದ ಉಭಯ ದೇಶಗಳ ಮಿಲಿಟರಿ ಸಂಘರ್ಷದ ವೇಳೆಯಲ್ಲಿ ಪಾಕಿಸ್ತಾನಕ್ಕೆ ದೇವರ ನೆರವು ಸಿಕ್ಕಿತು ಎಂದು ಪಾಕಿಸ್ತಾನದ ರಕ್ಷಣಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಹೇಳಿದ್ದಾರೆ.
ಅಪ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಪ್ಘನ್ ಪ್ರಜೆಗಳೇ ಹೆಚ್ಚಾಗಿದ್ದು, ಪಾಕಿಸ್ತಾನ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇಸ್ಲಾಮಾಬಾದ್ ನಲ್ಲಿ ಇತ್ತೀಚಿಗೆ ನಡೆದ ರಾಷ್ಟ್ರೀಯ ಉಲೇಮಾ ಸಮಾವೇಶದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಭಾರತದೊಂದಿಗೆ ನಾಲ್ಕು ದಿನಗಳ ಮೇ ಸಂಘರ್ಷದ ಕುರಿತು ಮಾತನಾಡಿದ ಮುನೀರ್, ಭಾರತದ ವಿರುದ್ಧ ಪಾಕಿಸ್ತಾನದ ಸೋಲಿನ ಸಮಯದಲ್ಲಿ ಸಶಸ್ತ್ರ ಪಡೆಗಳಿಗೆ ದೇವರ ನೆರವು ಸಿಕ್ಕಿತು. ನಾಮಗೂ ಅದೇ ಅನಿಸುತ್ತಿದೆ ಎಂದು ಹೇಳಿದರು.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಟ್ಟುಕೊಂಡು ಭಾರತವು ಮೇ 7 ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಪ್ರಾರಂಭಿಸಿತು.
ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಮಿಲಿಟರಿ ಸಂಘರ್ಘದ ನಂತರ ಮೇ 10 ರಂದು ಕದನ ವಿರಾಮ ಒಪ್ಪಂದ ಜಾರಿಗೆ ಬಂದಿತು.
Advertisement