ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನೇಪಾಳದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲು, ಭಾರತ-ಟಿಬೆಟ್‌ನಲ್ಲೂ ನಡುಗಿದ ಭೂಮಿ!

ನೇಪಾಳದ ಮಧ್ಯ ಭಾಗದಲ್ಲಿರುವ ಹಿಮಾಲಯ ಪ್ರದೇಶದಲ್ಲಿ ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಭೂಕಂಪದ ಕೇಂದ್ರ ಬಿಂದು ಹೇಳಲಾಗುತ್ತಿದೆ.
Published on

ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ. ನೇಪಾಳದ ಪೂರ್ವ ಮತ್ತು ಮಧ್ಯ ಭಾಗಗಳಲ್ಲಿರುವ ಜನರಿಗೆ ಭೂಕಂಪದ ಅನುಭವ ಆಗಿದೆ. ಅಲ್ಲದೆ ಭಾರತ ಚೀನಾ ಮತ್ತು, ಟಿಬೆಟ್‌ನ ಕೆಲವು ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.

ನೇಪಾಳದ ಮಧ್ಯ ಭಾಗದಲ್ಲಿರುವ ಹಿಮಾಲಯ ಪ್ರದೇಶದಲ್ಲಿ ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಭೂಕಂಪದ ಕೇಂದ್ರ ಬಿಂದು ಹೇಳಲಾಗುತ್ತಿದೆ.

ಭೂಕಂಪದ ಕೇಂದ್ರಬಿಂದು ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿದ್ದು, ಭೂಕಂಪ ಬೆಳಿಗ್ಗೆ 2.51ಕ್ಕೆ (ಸ್ಥಳೀಯ ಸಮಯ) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಮತ್ತು ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.

ಭೂಕಂಪದ ಪರಿಣಾಮ ಯಾವುದೇ ಸಾವುನೋವುಗಳು ಅಥವಾ ಗಂಭೀರ ಹಾನಿಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ನೇಪಾಳವು ಹೆಚ್ಚು ಭೂಕಂಪ ಪೀಡಿತ ಪ್ರದೇಶವಾಗಿರುವುದರಿಂದ, ಜನರು ಎಚ್ಚರಿಕೆಯಿಂದಿರಲು ಮತ್ತು ನಂತರದ ಭೂಕಂಪಗಳ ಬಗ್ಗೆ ಜಾಗರೂಕರಾಗಿರಲು ಅಧಿಕಾರಿಗಳು ಸೂಚಿಸಿದ್ದಾರೆ. ಭೂಕಂಪದ ನಂತರದ ಸಣ್ಣ ಕಂಪನಗಳಿಗೆ ಸಿದ್ಧರಾಗಿರಿ ಎಂದೂ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ನಿನ್ನೆಯಷ್ಟೇ ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ 5.0 ತೀವ್ರತೆಯ ಭೂಕಂಪ ಸಂಭವಿಸಿತ್ತು. ರಾಜಧಾನಿ ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲೂ ಜನ ಕಂಪನದ ಅನುಭವ ಪಡೆದುಕೊಂಡಿದ್ದರು.

ಭೂಕಂಪವು ಭೂಮಿಯ 16 ಕಿಲೋಮೀಟರ್ ಆಳದಲ್ಲಿ ಆಗಿದ್ದು, ತಡರಾತ್ರಿ ಸುಮಾರು 2:25 ಗಂಟೆಗೆ ಈ ಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com