Donald Trump Inauguration: ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪದಗ್ರಹಣ; ವಿದೇಶಾಂಗ ಸಚಿವ ಜೈಶಂಕರ್, ಅಂಬಾನಿ ಭಾಗಿ

ವಾಷಿಂಗ್ ಟನ್ ಡಿಸಿಯ ಕ್ಯಾಪಿಟಲ್ ಹಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು.
Donald Trump
ಡೊನಾಲ್ಡ್ ಟ್ರಂಪ್online desk
Updated on

ವಾಷಿಂಗ್ ಟನ್ ಡಿಸಿ: ಅಮೇರಿಕಾದ 47ನೇ ಅಧ್ಯಕ್ಷರಾಗಿ Donald Trump ಇಂದು ಪ್ರಮಾಣವಚನ ಸ್ವೀಕರಿಸಿದರು.

ವಾಷಿಂಗ್ ಟನ್ ಡಿಸಿಯ ಕ್ಯಾಪಿಟಲ್ ಹಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು.

ಟ್ರಂಪ್ ಗೂ ಮುನ್ನ ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಭಾರತದ ಉದ್ಯಮಿ ಮುಖೇಶ್ ಅಂಬಾನಿ ಭಾಗಿಯಾಗಿದ್ದರು.

ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಟ್ರಂಪ್ ಅವರ ಕುಟುಂಬ ಮತ್ತು ಕ್ಯಾಬಿನೆಟ್ ಸದಸ್ಯರ ಜೊತೆಗೆ, ಎಲೋನ್ ಮಸ್ಕ್, ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಸೇರಿದಂತೆ ಟೆಕ್ ಉದ್ಯಮಿಗಳು, ಗಣ್ಯರು ಕ್ಯಾಪಿಟಲ್‌ನಲ್ಲಿ ಉಪಸ್ಥಿತರಿದ್ದರು.

Donald Trump
ಅಮೆರಿಕ ಎದುರಿಸುತ್ತಿರುವ ಪ್ರತಿಯೊಂದು ಬಿಕ್ಕಟ್ಟನ್ನೂ ಸರಿಪಡಿಸಲು ಐತಿಹಾಸಿಕ ವೇಗದಲ್ಲಿ ಕೆಲಸ ಮಾಡುತ್ತೇವೆ: Donald Trump

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com