Donald Trump
ಡೊನಾಲ್ಡ್ ಟ್ರಂಪ್

ವಿಶ್ವ ಆರೋಗ್ಯ ಸಂಸ್ಥೆಯಿಂದ ಟ್ರಂಪ್ ಹೊರಹೋಗಿದ್ದಕ್ಕೆ WHO ವಿಷಾದ; ನಿರ್ಧಾರ ಹಿಂಪಡೆಯುವ ವಿಶ್ವಾಸ

ಅಮೆರಿಕವು ಈ ನಿರ್ಧಾರವನ್ನು ಮರುಪರಿಶೀಲಿಸುತ್ತದೆ ಎಂದು ನಾವು ಭಾವಿಸುತ್ತೇವೆ.
Published on

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದಕ್ಕೆ ವಿಶ್ವ ಆರೋಗ್ಯ ಸಂಸ್ಥೆ(WHO) ಮಂಗಳವಾರ ತೀವ್ರ ವಿಷಾದ ವ್ಯಕ್ತಪಡಿಸಿದೆ ಮತ್ತು ಈ ನಿರ್ಧಾರವ ಹಿಂಪಡೆಯುವ ಭರವಸೆ ವ್ಯಕ್ತಪಡಿಸಿದೆ.

"ಅಮೆರಿಕವು ಈ ನಿರ್ಧಾರವನ್ನು ಮರುಪರಿಶೀಲಿಸುತ್ತದೆ ಎಂದು ನಾವು ಭಾವಿಸುತ್ತೇವೆ ಮತ್ತು ಜಗತ್ತಿನಾದ್ಯಂತ ಲಕ್ಷಾಂತರ ಜನರ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಯೋಜನಕ್ಕಾಗಿ USA ಮತ್ತು WHO ನಡುವಿನ ಪಾಲುದಾರಿಕೆಯನ್ನು ಕಾಪಾಡಿಕೊಳ್ಳಲು ರಚನಾತ್ಮಕ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ" ಎಂದು WHO ಹೇಳಿದೆ.

ಟ್ರಂಪ್ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳುವ ಆದೇಶಕ್ಕೆ ಸಹಿ ಹಾಕಿದರು. WHO ಅಮೆರಿಕಕ್ಕೆ ಪಕ್ಷಪಾತ ಮಾಡುತ್ತಿದ್ದು, ಚೀನಾಗೆ ಸಹಾಯ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

Donald Trump
Donald Trump Inauguration: ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪದಗ್ರಹಣ; ವಿದೇಶಾಂಗ ಸಚಿವ ಜೈಶಂಕರ್, ಅಂಬಾನಿ ಭಾಗಿ

ಕೊರೋನಾ ಸಮಯದಲ್ಲಿ COVID-19 ಸಾಂಕ್ರಾಮಿಕ ರೋಗ ನಿರ್ವಹಣೆಗೆ ಸಂಬಂಧಿಸಿದಂತೆ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

"ಅಮೆರಿಕವು 1948 ರಲ್ಲಿ ಸ್ಥಾಪನೆಯಾದ ವಿಶ್ವ ಆರೋಗ್ಯ ಸಂಸ್ಥೆಯ ಸ್ಥಾಪಕ ಸದಸ್ಯನಾಗಿದೆ. ವಿಶ್ವ ಆರೋಗ್ಯ ಸಭೆ ಮತ್ತು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಸೇರಿದಂತೆ WHOನ ಹಲವು ಪ್ರಮುಖ ನೀತಿಗಳನ್ನು ರೂಪಿಸುವಲ್ಲಿ ಮತ್ತು ನಿಯಂತ್ರಿಸುವಲ್ಲಿ 193 ಇತರ ಸದಸ್ಯ ರಾಷ್ಟ್ರಗಳೊಂದಿಗೆ ಪ್ರಮುಖ ಪಾತ್ರ ವಹಿಸುತ್ತಿತ್ತು.

X

Advertisement

X
Kannada Prabha
www.kannadaprabha.com