
ಫ್ಲೋರಿಡಾ: ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ವೇತಭವನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಫ್ಲೋರಿಡಾದಿಂದ ಜಾಯಿಂಟ್ ಬೇಸ್ ಆಂಡ್ರ್ಯೂಸ್‌ಗೆ ಹಿಂದಿರುಗುವಾಗ ವಾಯುನೆಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇಂದು ಬೆಳಗ್ಗೆ ಟ್ರಂಪ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ ಎಂದರು.
ಪ್ರಧಾನಿ ಮೋದಿ ಜೊತೆಗಿನ ದೂರವಾಣಿ ಸಂಭಾಷಣೆ ಕುರಿತ ಪ್ರಶ್ನೆಗೆ ಟ್ರಂಪ್ ಉತ್ತರಿಸಿದರು. ಭಾರತದೊಂದಿಗೆ ನಾವು ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಎಂದು ತಿಳಿಸಿದರು.
ಮೊದಲ ಬಾರಿಗೆ ಅಧ್ಯಕ್ಷರಾಗಿ ಟ್ರಂಪ್ ಅವರ ಕೊನೆಯ ವಿದೇಶ ಪ್ರವಾಸ ಭಾರತ ಆಗಿತ್ತು. ಟ್ರಂಪ್ ಮತ್ತು ಮೋದಿ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಇಬ್ಬರೂ ಸೆಪ್ಟೆಂಬರ್ 2019 ರಲ್ಲಿ ಹೂಸ್ಟನ್‌ನಲ್ಲಿ ಮತ್ತು 2020 ರ ಫೆಬ್ರವರಿಯಲ್ಲಿ ಅಹಮದಾಬಾದ್‌ನಲ್ಲಿ ಎರಡು ವಿಭಿನ್ನ ರ‍್ಯಾಲಿಯಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ್ದರು.
Advertisement