
ಢಾಕಾ: ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬುಧವಾರ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ(ಐಸಿಟಿ)ಯು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಐಸಿಟಿ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಈ ತೀರ್ಪು ನೀಡಿದೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ತಿಳಿಸಿದೆ.
ಇದೇ ತೀರ್ಪಿನಲ್ಲಿ, ಗೈಬಂಧದ ಗೋಬಿಂದಗಂಜ್‌ನ ಶಕಿಲ್ ಅಕಂದ್ ಬುಲ್ಬುಲ್‌ಗೆ ನ್ಯಾಯಮಂಡಳಿ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಶೇಖ್ ಹಸೀನಾ ಅವರು 11 ತಿಂಗಳ ಹಿಂದೆ ಅಧಿಕಾರ ತೊರೆದು ದೇಶದಿಂದ ಪಲಾಯನ ಮಾಡಿದ ನಂತರ ಮೊದಲ ಬಾರಿ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
Advertisement