
ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಬಹುಮಹಡಿ ವಸತಿ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಇನ್ನೂ ಹಲವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಲಿಯಾರಿಯ ಬಾಗ್ದಾದಿ ಪ್ರದೇಶದಲ್ಲಿ ಶುಕ್ರವಾರ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿತ್ತು. ಈ ದುರ್ಘಟನೆಯಲ್ಲಿ ಮೃತರಾದ ಒಂಬತ್ತು ಮಹಿಳೆಯರು, 15 ಪುರುಷರು, ಮೂವರು ಮಕ್ಕಳು ಸೇರಿದಂತೆ ಒಟ್ಟು 27 ಮೃತದೇಹಗಳು ಇಲ್ಲಿಯವರೆಗೆ ಪತ್ತೆಯಾಗಿವೆ.
ಮೃತದೇಹಗಳನ್ನು ಈಧಿ ಆಂಬ್ಯುಲೆನ್ಸ್ ಮೂಲಕ ಕರಾಚಿಯ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಡಾನ್ ನ್ಯೂಸ್ ಪೇಪರ್ ವರದಿ ಮಾಡಿದೆ. ಅವಶೇಷಗಳಡಿ ಇನ್ನೂ ಹಲವರು ನಾಪತ್ತೆಯಾಗಿದ್ದಾರೆ.
ಅವಶೇಷಗಳಡಿ ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ಮೂವರು ಮಹಿಳೆಯರು ಸೇರಿದಂತೆ ಐದು ಜನರು ಇಲ್ಲಿಯವರೆಗೆ ಗಾಯಗೊಂಡಿದ್ದಾರೆ ಎಂದು ಈಧಿ ರಕ್ಷಣಾ ಸೇವೆ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.
ಈ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ, ಕಟ್ಟಡ ಕುಸಿತಕ್ಕೆ ಕಾರಣಗಳ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
Advertisement