
ಕೆನಡಾದ ಟೊರೊಂಟೊದಲ್ಲಿ ನಡೆಸಲಾದ ರಥಯಾತ್ರೆಗೆ ಅಡ್ಡಿಪಡಿಸಲು ಪ್ರಯತ್ನಿಸಲಾಗಿದೆ. ಕೆಲ ದುಷ್ಕರ್ಮಿಗಲು ರಥಯಾತ್ರೆಯಲ್ಲಿ ಭಾಗಿಯಾಗಿದ್ದ ಭಕ್ತರ ಮೇಲೆ ಮೊಟ್ಟೆಗಳನ್ನು ಎಸೆದಿದ್ದಾರೆ. ಈ ಘಟನೆಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಅದೇ ಸಮಯದಲ್ಲಿ, ಇದು ಹಬ್ಬದ ಉತ್ಸವ, ಸಾಮಾಜಿಕ ಸಾಮರಸ್ಯಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಟೊರೊಂಟೊದಲ್ಲಿ ರಥಯಾತ್ರೆಯ ಸಮಯದಲ್ಲಿ ಕಿಡಿಗೇಡಿಗಳು ರಥಯಾತ್ರೆಗೆ ಅಡ್ಡಿಪಡಿಸಿದ ವರದಿಗಳನ್ನು ನಾವು ನೋಡಿದ್ದೇವೆ. ಇಂತಹ ಖಂಡನೀಯ ಕೃತ್ಯಗಳು ವಿಷಾದನೀಯ ಮಾತ್ರವಲ್ಲದೆ ಎಲ್ಲರನ್ನೂ ಒಳಗೊಳ್ಳುವ ಹಬ್ಬದ ಮನೋಭಾವಕ್ಕೆ ವಿರುದ್ಧವಾಗಿವೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬಹಳ ವೈರಲ್ ಆಗುತ್ತಿದೆ. ಇನ್‌ಸ್ಟಾಗ್ರಾಮ್ ಬಳಕೆದಾರ ಸಂಗ್ನಾ ಬಜಾಜ್ ಇಸ್ಕಾನ್‌ನ ರಥಯಾತ್ರೆಯಲ್ಲಿ ಭಾಗಿಯಾಗಿದ್ದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ರಥಯಾತ್ರೆ ಮೇಲೆ ಮೊಟ್ಟೆಗಳನ್ನು ಎಸೆಯಲಾಗಿದೆ. ಮೊಟ್ಟೆಗಳು ರಸ್ತೆಯ ಮೇಲೆ ಬಿದ್ದಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹತ್ತಿರದ ಕಟ್ಟಡದಿಂದ ಮೊಟ್ಟೆಗಳನ್ನು ಎಸೆಯಲಾಗಿದೆ ಎಂದು ಬಜಾಜ್ ಹೇಳಿದ್ದಾರೆ.
Advertisement