ಸುಂಕದ ಜೊತೆಗೆ ದಂಡವನ್ನು ಪಾವತಿಸಬೇಕು...: ಭಾರತದ ಮೇಲೆ ಶೇ. 25ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್; ಆಗಸ್ಟ್ 1 ರಿಂದ ಅನ್ವಯ!

ಭಾರತ ನಮ್ಮ ಸ್ನೇಹಿತ, ಆದರೆ ಕಳೆದ ಹಲವಾರು ವರ್ಷಗಳಿಂದ ನಾವು ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯಾಪಾರ ಮಾಡಿದ್ದೇವೆ. ಏಕೆಂದರೆ ಭಾರತದ ಸುಂಕಗಳು ತುಂಬಾ ಹೆಚ್ಚಿವೆ. ಅದು ವಿಶ್ವದಲ್ಲೇ ಅತ್ಯಧಿಕವಾಗಿವೆ.
Narendra Modi-Donald Trump
ನರೇಂದ್ರ ಮೋದಿ-ಡೊನಾಲ್ಡ್ ಟ್ರಂಪ್
Updated on

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇಕಡ 25ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು ಭಾರತದ ಮೇಲೆ ಶೇ. 25ರಷ್ಟು ಸುಂಕವನ್ನು ವಿಧಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾರತದ ಮೇಲಿನ 25 ಪ್ರತಿಶತ ಅಮೆರಿಕ ಸುಂಕವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದು ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ, ನೆನಪಿಡಿ, ಭಾರತ ನಮ್ಮ ಸ್ನೇಹಿತ, ಆದರೆ ಕಳೆದ ಹಲವಾರು ವರ್ಷಗಳಿಂದ ನಾವು ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯಾಪಾರ ಮಾಡಿದ್ದೇವೆ. ಏಕೆಂದರೆ ಭಾರತದ ಸುಂಕಗಳು ತುಂಬಾ ಹೆಚ್ಚಿವೆ. ಅದು ವಿಶ್ವದಲ್ಲೇ ಅತ್ಯಧಿಕವಾಗಿವೆ. ಅವು ಯಾವುದೇ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಹಿತಕರವಾದ ವಿತ್ತೀಯವಲ್ಲದ ವ್ಯಾಪಾರ ಅಡೆತಡೆಗಳನ್ನು ಹೊಂದಿವೆ ಎಂದು ಬರೆದಿದ್ದಾರೆ.

ಇದಲ್ಲದೆ, ಭಾರತ ಯಾವಾಗಲೂ ತಮ್ಮ ಹೆಚ್ಚಿನ ಮಿಲಿಟರಿ ಉಪಕರಣಗಳನ್ನು ರಷ್ಯಾದಿಂದ ಖರೀದಿಸುತ್ತಾರೆ. ಚೀನಾ ಜೊತೆಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರ ದೇಶವಾಗಿದೆ. ಉಕ್ರೇನ್‌ನಲ್ಲಿ ಮೇಲೆ ರಷ್ಯಾ ಯುದ್ಧವನ್ನು ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಸಮಯದಲ್ಲಿ. ಇವೆಲ್ಲವೂ ಒಳ್ಳೆಯದಲ್ಲ! ಆದ್ದರಿಂದ, ಆಗಸ್ಟ್ 1ರಿಂದ ಭಾರತವು ಶೇ. 25 ರಷ್ಟು ಸುಂಕವನ್ನು ಪಾವತಿಸಬೇಕಾಗುತ್ತದೆ. ಜೊತೆಗೆ ಮೇಲೆ ನೀಡಲಾದ ಕಾರಣಗಳಿಗಾಗಿ ದಂಡವನ್ನು ಸಹ ಪಾವತಿಸಬೇಕಾಗುತ್ತದೆ. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಪ್ರಿಲ್‌ನಲ್ಲಿ ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. 26 ರಷ್ಟು ಹೆಚ್ಚುವರಿ ಸುಂಕವನ್ನು ವಿಧಿಸಿದ್ದರು. ಆದರೆ ಅದನ್ನು ಜುಲೈ 9ರವರೆಗೆ ಅಮಾನತುಗೊಳಿಸಿತ್ತು. ನಂತರ ಈ ಅಮಾನತನ್ನು ಆಗಸ್ಟ್ 1 ರವರೆಗೆ ವಿಸ್ತರಿಸಲಾಯಿತು. ಆದಾಗ್ಯೂ, ಈ ಅವಧಿಯಲ್ಲಿ ಶೇ. 10ರ ಮೂಲ ಸುಂಕ ಅನ್ವಯಿಸುತ್ತಿತ್ತು. ಈಗ ಟ್ರಂಪ್ ಭಾರತದ ಮೇಲೆ ಶೇ. 25 ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ.

Narendra Modi-Donald Trump
ಅಮೇರಿಕಾಗೆ BRICS ಡಿಚ್ಚಿ! (ಹಣಕ್ಲಾಸು)

ಕಸ್ಟಮ್ಸ್ ಸುಂಕವನ್ನು ತರ್ಕಬದ್ಧಗೊಳಿಸಲು ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಬಗ್ಗೆ ಮಾತುಕತೆ ನಡೆಸುತ್ತಿವೆ. ಆಗಸ್ಟ್ 1 ರ ಮೊದಲು ಅವರು ಮಧ್ಯಂತರ ಒಪ್ಪಂದವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ಒಮ್ಮತಕ್ಕೆ ಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com