ಇಸ್ರೇಲ್ ದಾಳಿ: ಇರಾನ್‌ನ ರೆವಲ್ಯೂಷನರಿ ಗಾರ್ಡ್ ನಾಯಕ ಜನರಲ್ ಹುಸೇನ್ ಸಲಾಮಿ ಹತ್ಯೆ

ಇರಾನ್‌ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಅವರನ್ನು ಹತ್ಯೆ ಮಾಡಲಾಗಿದೆ.
Gen Hossein Salami
ಜನರಲ್ ಹುಸೇನ್ ಸಲಾಮಿ
Updated on

ಟೆಲ್ ಅವಿವ್: ಇಸ್ರೇಲ್ ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಟಿವಿ ದೃಢಪಡಿಸಿದೆ.

ಇರಾನ್‌ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಅವರನ್ನು ಹತ್ಯೆ ಮಾಡಲಾಗಿದೆ. ಸಲಾಮಿ ಸಾವು ಇರಾನ್‌ ಸಂಘರ್ಷದ ನಾಯಕತ್ವಕ್ಕೆ ಕಠಿಣ ಹೊಡೆತ ನೀಡಿದೆ.

ರೆವಲ್ಯೂಷನರಿ ಗಾರ್ಡ್ಸ್, ಇರಾನ್ ದೇಶದ ಶಕ್ತಿಕೇಂದ್ರ ಎಂದು ಬಿಂಬಿತವಾಗಿದೆ. ಹಾಗಾಗಿ, ಇದನ್ನೇ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸಿದ್ದು, ಇರಾನ್ ದೇಶದ ಸ್ವಾಭಿಮಾನಕ್ಕೆ ದೊಡ್ಡ ಪೆಟ್ಟು ಕೊಟ್ಟಂತಾಗಿದೆ.

Gen Hossein Salami
ಇಸ್ರೇಲ್ ವೈಮಾನಿಕ ದಾಳಿ: ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆ; ಪರಿಸ್ಥಿತಿ ಮತ್ತಷ್ಟು ಉಲ್ಬಣ

ಸಲಾಮಿ ಆರು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದ್ದರು ಮತ್ತು ಅಮೆರಿಕ ಹಾಗೂ ಇಸ್ರೇಲ್‌ಗೆ ಬೆದರಿಕೆ ಹಾಕುವ ಇತಿಹಾಸವನ್ನು ಹೊಂದಿದ್ದರು. ಹಾಗಾಗಿ, ಉದ್ದೇಶಪೂರ್ವಕವಾಗಿಯೇ ಇಸ್ರೇಲ್ ಅವರನ್ನು ಟಾರ್ಗೆಟ್ ಮಾಡಿದೆ.

1979ರ ಇಸ್ಲಾಮಿಕ್ ಕ್ರಾಂತಿಯ ನಂತರ ರೆವಲ್ಯೂಷನರಿ ಗಾರ್ಡ್ಸ್ ಅಸ್ತಿತ್ವಕ್ಕೆ ಬಂದಿತ್ತು. ಇದಾದ ನಂತರ, ಇದು ದೇಶೀಯ ಭದ್ರತಾ ಪಡೆಯಾಗಿ ಮುಂದುವರಿಯಿತು. ಸಿರಿಯಾ, ಲೆಬನಾನ್ ಮತ್ತು ಇರಾಕ್ ನಂತಹ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸಹಾಯ ಮಾಡುವ ಅಂತರರಾಷ್ಟ್ರೀಯ ಪಡೆಯಾಗಿ ಗುರುತಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com