ಇಸ್ರೇಲ್ ವೈಮಾನಿಕ ದಾಳಿ: ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆ; ಪರಿಸ್ಥಿತಿ ಮತ್ತಷ್ಟು ಉಲ್ಬಣ

ಈ ಸಂಬಂಧ ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ.
Mohammad Bagheri
ಮೊಹಮ್ಮದ್ ಬಘೇರಿ
Updated on

ಜೆರುಸಲೇಂ: ಮಧ್ಯ ಪ್ರಾಚ್ಯದಲ್ಲಿ ಭಾರಿ ಸಂಘರ್ಷ ಸಂಭವಿಸುವ ಸಾಧ್ಯತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇರಾನ್‌ ವಿರುದ್ಧ ಇಸ್ರೇಲ್‌ ಪೂರ್ವಭಾವಿ ದಾಳಿ ನಡೆಸಿದೆ.

ಇರಾನ್‌ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಶುಕ್ರವಾರ (ಜೂ.13) ದಾಳಿ ನಡೆಸಲಾಗಿದೆ. ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದ್ದು, ಉದ್ನಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ವಾಯು ರಕ್ಷಣಾ ಪಡೆಗಳು ಶೇಕಡಾ 100 ರಷ್ಟು ಕಾರ್ಯಾಚರಣೆಯ ಸಾಮರ್ಥ್ಯದಲ್ಲಿವೆ ಎಂದು ಹೇಳಿದೆ.

ಇನ್ನೂ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಇರಾನ್‌ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದೂ ಸಹ ಇಸ್ರೇಲ್ ಸೇನೆ ಹೇಳಿದೆ.

ಇರಾನ್ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಟೆಹ್ರಾನ್‌ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ಟೆಹ್ರಾನ್‌‍ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಟೆಹ್ರಾನ್ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಬೆನ್ನಲ್ಲೇ ಇರಾನ್‌ನಿಂದ ಪ್ರತಿ ದಾಳಿ ನಿರೀಕ್ಷೆ ಮಾಡುತ್ತಿರುವ ಇಸ್ರೇಲ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

Mohammad Bagheri
ಸಹಿ ಹಾಕ್ಲಿಲ್ಲ ಅಂದ್ರೆ 'ಬಾಂಬ್' ಹಾಕ್ತೀನಿ: ಇರಾನ್ ಗೆ Donald Trump ಎಚ್ಚರಿಕೆ!

ಅಣ್ವಸ್ತ್ರ ಹಾಗೂ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಕೇವಲ 5 ದಿನಗಳಲ್ಲಿ ಪರಮಾಣು ಬಾಂಬ್ ತಯಾರಿಕೆ ಮಾಡುವ ಸಾಮಗ್ರಿ ಇರಾನ್ ಬಳಿ ಇದೆ ಎಂದು ಇಸ್ರೇಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅತ್ತ ಇಸ್ರೇಲ್‌ನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರತಿದಾಳಿಗೆ ವಾಯು ರಕ್ಷಣಾ ವ್ಯವಸ್ಥೆ ಪೂರ್ಣ ಸಿದ್ಧವಾಗಿದೆ ಎಂದು ಇರಾನ್‌ನ ಸರ್ಕಾರಿ ಟಿ.ವಿ ತಿಳಿಸಿದೆ. ಇಸ್ರೇಲ್ ತುರ್ತು ಪರಿಸ್ಥಿತಿ ಘೋಷಿಸಿದೆ. ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಕಾರ್ಯಾಚರಣೆಯ ನಂತರ ಟೆಹ್ರಾನ್‌ನಿಂದ ಪ್ರತೀಕಾರದ ಕ್ರಮ ಸಾಧ್ಯ ಎಂದು ಹೇಳಿದರು.

ಇಸ್ರೇಲ್ ನ ಈ ಕಾರ್ಯಾಚರಣೆಯನ್ನು ‘ರೈಸಿಂಗ್ ಲಯನ್’ ಎಂದು ಕರೆದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, 'ನಾವು ಇರಾನ್ ಅಣ್ವಸ್ತ್ರ ಯೋಜನೆಯ ಮೇಲೆ ದಾಳಿ ನಡೆಸಿದ್ದೇವೆ. ಇರಾನ್‌ನ ಗುರಿ ನಿರ್ದೇಶಿತ ಕ್ಷಿಪಣಿ ಯೋಜನೆಯ ಮೇಲೆಯೂ ದಾಳಿ ನಡೆಸಲಾಗಿದೆ' ಎಂದು ಹೇಳಿದ್ದಾರೆ.'

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com