3 ನೇ ದಿನವೂ ಇಸ್ರೇಲ್-ಇರಾನ್ ಸಂಘರ್ಷ ತೀವ್ರ: 230 ಮಂದಿ ಸಾವು; ಖಮೇನಿ ಹತ್ಯೆ ಯೋಜನೆ ವಿಫಲಗೊಳಿಸಿದ ಟ್ರಂಪ್!

ಟೆಹರಾನ್‌ನಲ್ಲಿರುವ ಇರಾನ್‌ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮೇಲೆ ಇಸ್ರೇಲ್‌ ಭಾನುವಾರ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್‌ನ ಕ್ಷಿಪಣಿಗಳು, ಇಸ್ರೇಲ್‌ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸಿ, ಹಲವು ಕಟ್ಟಡಗಳನ್ನು ನಾಶಗೊಳಿಸಿವೆ.
Israel-Iran tensions
ತೀವ್ರಗೊಂಡ ಇಸ್ರೇಲ್- ಇರಾನ್ ಸಂಘರ್ಷ
Updated on

ಜೆರುಸಲೇಂ: ಇರಾನ್‌ನ ರಕ್ಷಣಾ ಕೇಂದ್ರಗಳು, ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿಯನ್ನು ತೀವ್ರಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ದಾಳಿ ನಡೆಸಿದೆ. ಹೋರಾಟ ನಿಲ್ಲಿಸುವಂತೆ ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿದಿಲ್ಲ ಹೀಗಾಗಿ ಸಂಘರ್ಷ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಸ್ರೇಲ್ ತನ್ನ ತೈಲ ಸಂಸ್ಕರಣಾಗಾರಗಳನ್ನು ಹೊಡೆದುರುಳಿಸಿದೆ, ತನ್ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಗುಪ್ತಚರ ಮುಖ್ಯಸ್ಥ ಮತ್ತು ಇತರ ಇಬ್ಬರು ಜನರಲ್‌ಗಳನ್ನು ಕೊಂದಿದೆ. ಜನಸಂಖ್ಯಾ ಕೇಂದ್ರಗಳ ಮೇಲೆ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್ ಹೇಳಿದೆ

ಟೆಹರಾನ್‌ನಲ್ಲಿರುವ ಇರಾನ್‌ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮೇಲೆ ಇಸ್ರೇಲ್‌ ಭಾನುವಾರ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್‌ನ ಕ್ಷಿಪಣಿಗಳು, ಇಸ್ರೇಲ್‌ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸಿ, ಹಲವು ಕಟ್ಟಡಗಳನ್ನು ನಾಶಗೊಳಿಸಿವೆ.

ಸೋಮವಾರ ಬೆಳಿಗ್ಗೆ ಟೆಹರಾನ್‌ನ ವಿವಿಧೆಡೆಯೂ ಸ್ಫೋಟಗಳು ಸಂಭವಿಸಿವೆ. ನಾಲ್ಕು ದಿನಗಳ ಸಂಘರ್ಷದಲ್ಲಿ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್‌ನ ವಿಶ್ವಸಂಸ್ಥೆಯ ರಾಯಭಾರಿ ತಿಳಿಸಿದ್ದಾರೆ.

ಆಪರೇಷನ್‌ ರೈಸಿಂಗ್‌ ಲಯನ್ ಹೆಸರಿನಡಿ ಇಸ್ರೇಲ್ ನಡೆದ ಕಾರ್ಯಾಚರಣೆಯಲ್ಲಿ ಇರಾನ್‌ ಸೇನೆಯ ಅತ್ಯುನ್ನತ ಶ್ರೇಣಿಯ ಅಧಿಕಾರಿ, ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ ಮತ್ತು ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕೋರ್‌ (ಐಆರ್‌ಜಿಸಿ) ಮುಖ್ಯಸ್ಥ ಹುಸೇನ್‌ ಸಲಾಮಿ ಅವರು ಶುಕ್ರವಾರ ಮೃತಪಟ್ಟಿದ್ದರು.

ಐಆರ್‌ಜಿಸಿಯ ಗುರಿ ನಿರ್ದೇಶಿತ ಕ್ಷಿಪಣಿ ಯೋಜನೆಯ ಮುಖ್ಯಸ್ಥ ಅಮೀರ್‌ ಅಲಿ ಹಾಜಿಝದಾ ಅವರೂ ಮೃತಪಟ್ಟಿದ್ದರು. ಈ ಮೂವರ ಸಾವನ್ನು ಇರಾನ್‌ ದೃಢಪಡಿಸಿತ್ತು. ಇರಾನ್‌ ಪರಮಾಣು ಯೋಜನೆಯಲ್ಲಿ ಭಾಗಿಯಾಗಿರುವ ಹಲವು ವಿಜ್ಞಾನಿಗಳೂ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಈ ದಾಳಿಗೆ ಪ್ರತ್ಯುತ್ತರವಾಗಿ ಇಸ್ರೇಲ್‌ ಅನ್ನು ‘ಕಠಿಣ ಶಿಕ್ಷೆ’ಗೆ ಗುರಿಪಡಿಸಲಾಗುವುದು ಎಂದು ಇರಾನ್‌ನ ಪರಮೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಎಚ್ಚರಿಸಿದ್ದಾರೆ. ಇದರ ಬೆನ್ನಲ್ಲೇ ಇರಾನ್‌ ಸೇನೆ ಇಸ್ರೇಲ್‌ನತ್ತ ಹಲವು ಡ್ರೋನ್‌ಗಳನ್ನು ಹಾರಿಸಿದೆ.

Israel-Iran tensions
ರಕ್ಷಣಾ ಸೌಲಭ್ಯಗಳ ಮೇಲೆ ದಾಳಿಗೆ ಪ್ರತೀಕಾರ: ಇರಾನ್ ಕ್ಷಿಪಣಿ ದಾಳಿಗೆ 8 ಮಂದಿ ಇಸ್ರೇಲ್ ಪ್ರಜೆಗಳು ಸಾವು

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಕೊಲ್ಲುವ ಇಸ್ರೇಲ್ ಯೋಜನೆಯನ್ನು ವಿಫಲಗೊಳಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ. ಖಮೇನಿ ಎಲ್ಲಾ ಪ್ರಮುಖ ನೀತಿಗಳ ಮೇಲೆ ಅಂತಿಮ ಅಧಿಕಾರ ಹೊಂದಿದ್ದಾರೆ, ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಾರೆ ಮತ್ತು ಪ್ರಬಲ ಕ್ರಾಂತಿಕಾರಿ ಗಾರ್ಡ್ ನಿಯಂತ್ರಿಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com