
ಒಟ್ಟಾವಾ: ಕೆನಡಾದಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿನಿಯ ಸಾವಿನ ಸುದ್ದಿ ಬೆಳಕಿಗೆ ಬಂದಿದೆ. ಕೆನಡಾದ ಕ್ಯಾಲ್ಗರಿ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವುದಾಗಿ ವ್ಯಾಂಕೋವರ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಗುರುವಾರ ಮಾಹಿತಿ ನೀಡಿದೆ.
ಭಾರತೀಯ ವಿದ್ಯಾರ್ಥಿನಿಯ ನಿಧನದ ಸುದ್ದಿಯನ್ನು ಕಾನ್ಸುಲೇಟ್ ಟ್ವೀಟ್ ಮೂಲಕ ತಿಳಿಸಿದ್ದು, ಭಾರತೀಯ ವಿದ್ಯಾರ್ಥಿನಿ ತಾನ್ಯಾ ತ್ಯಾಗಿ ಅವರ ನಿಧನದ ಸುದ್ದಿ ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇವೆ.
ದೂತಾವಾಸ ಕೆನಡಾದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ತಾನ್ಯಾ ಅವರ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಹೇಳಿಕೊಂಡಿದೆ.
ವಿದ್ಯಾರ್ಥಿನಿಯ ಸಾವಿನ ಹಿಂದಿನ ಕಾರಣವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ ಎನ್ನಲಾಗಿದೆ. ಎರಡು ತಿಂಗಳ ಮೊದಲು ಕೆನಡಾದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ವಂಶಿಕಾ ನಾಪತ್ತೆಯಾಗಿದ್ದಳು ಇದಾಗಿ ನಾಲ್ಕು ದಿನಗಳ ಬಳಿಕ ವಂಶಿಕ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು.
Advertisement