
ವಾಷಿಂಗ್ಟನ್: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಘರ್ಷ ಸೇರಿದಂತೆ ಜಗತ್ತಿನಾದ್ಯಂತ ವಿವಿಧ ಸಂಘರ್ಷಗಳಲ್ಲಿ ಮಧ್ಯಸ್ಥಿಕೆ ವಹಿಸಿದ ಪ್ರಯತ್ನಗಳಿಗಾಗಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಟ್ರಂಪ್, ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಲು ತಾನು ಸಹಾಯ ಮಾಡಿದ್ದು ಎಂದು ಹೇಳಿದರು, ಆದರೆ ಇದನ್ನು ಭಾರತ ನಿರಾಕರಿಸಿತ್ತು.
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ, ಕಾಂಗೋ ಮತ್ತು ರುವಾಂಡಾ ನಡುವೆ ಅದ್ಭುತವಾದ ಒಪ್ಪಂದವನ್ನು ಮಾಡಿಕೊಂಡಿದ್ದೇನೆ ಎಂದು ಘೋಷಿಸುವ ಮೂಲಕ ಅಮೆರಿಕ ಅಧ್ಯಕ್ಷರು ಪೋಸ್ಟ್ ನ್ನು ಪ್ರಾರಂಭಿಸಿದರು.
ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್ ನಲ್ಲಿ ದಾಖಲೆಗಳಿಗೆ ಸಹಿ ಹಾಕಲಿದ್ದು, ಇದನ್ನು ಆಫ್ರಿಕಾಕ್ಕೆ ಶ್ರೇಷ್ಠ ದಿನ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ ಎಂದು ಬಣ್ಣಿಸಿದ್ದಾರೆ. ಆದರೆ ತಮ್ಮ ಪ್ರಯತ್ನಗಳಿಗೆ ನೊಬೆಲ್ ಪ್ರಶಸ್ತಿಯಂತಹ ಪಾರಿತೋಷಕ ಸಿಗುವುದಿಲ್ಲ ಎಂದು ವಿಷಾದಿಸಿದರು.
ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದರು.
ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಯಿತು, ಮೇ 7 ರ ಮುಂಜಾನೆ ಭಾರತ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತು. ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು.
ಭಾರತೀಯ ಸೇನೆ ಪಾಕಿಸ್ತಾನದ ಕ್ರಮಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿತು. ಮೇ 10 ರಂದು ಎರಡೂ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮವನ್ನು ನಿಲ್ಲಿಸುವ ಬಗ್ಗೆ ಒಪ್ಪಂದದೊಂದಿಗೆ ಯುದ್ಧ ಕೊನೆಗೊಂಡಿತು. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ನಿಲ್ಲಿಸಿದ್ದು ತಾನು ಎಂದು ಟ್ರಂಪ್ ಅಂದಿನಿಂದ ಹೇಳಿಕೊಂಡು ಬಪುತ್ತಿದ್ದಾರೆ.
ಆದರೆ, ಪಾಕಿಸ್ತಾನದೊಂದಿಗಿನ ಯುದ್ಧವನ್ನು ನಿಲ್ಲಿಸುವ ಬಗ್ಗೆ ಎರಡೂ ದೇಶಗಳ ಮಿಲಿಟರಿಗಳ ಮಹಾನಿರ್ದೇಶಕರ (DGMOs) ನಡುವಿನ ನೇರ ಮಾತುಕತೆಯ ನಂತರ ಒಪ್ಪಂದಕ್ಕೆ ಬರಲಾಯಿತು ಎಂದು ಭಾರತ ನಿರಂತರವಾಗಿ ಹೇಳುತ್ತಿದೆ.
Advertisement