
ಟೆಲ್ ಅವೀವ್: ಅಣುಸ್ಥಾವರಗಳ ಮೇಲೆ ಏರ್ ಸ್ಟ್ರೈಕ್ ಮಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ಕೊಂಡಾಡಿದ್ದು, ಇದೊಂದು ದಿಟ್ಟ ಹೆಜ್ಜೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಂಡಾಡಿದ್ದಾರೆ.
ಇದು ಅತ್ಯಂತ ಯಶಸ್ವಿ ದಾಳಿಯಾಗಿದ್ದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಶಕ್ತಿಯ ಮೂಲಕವು ಶಾಂತಿ ಸ್ಥಾಪಿಸಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಮೊದಲು ಶಕ್ತಿ ಪ್ರದರ್ಶನವಾದರೆ ನಂತರ ಶಾಂತಿ ನೆಲೆಸುತ್ತದೆ. ಅಮೆರಿಕ ನಿಜವಾಗಿಯೂ ವಿಶಿಷ್ಟವಾಗಿದೆ. ಭೂಮಿಯ ಮೇಲಿನ ಯಾವುದೇ ದೇಶ ಮಾಡಲು ಸಾಧ್ಯವಾಗದ ಕೆಲಸವನ್ನು ಅದು ಮಾಡಿದೆ ಎಂದು ತಿಳಿಸಿದ್ದಾರೆ.
Advertisement