3 ಪರಮಾಣು ನೆಲೆಗಳ ನಾಶ: ದಾಳಿ 'ಸಮಯ, ಸ್ವರೂಪ, ಪ್ರಮಾಣ' ನಿರ್ಧರಿಸುತ್ತೇವೆ; ಅಮೆರಿಕಾ ವಿರುದ್ಧ ಇರಾನ್ ಪ್ರತಿಕಾರದ ಶಪಥ!

ನಿನ್ನೆಯಷ್ಟೇ ಇರಾನ್‌ನ ಫೋರ್ಡೊ, ನಟಾನ್ಜ್ ಹಾಗೂ ಎಸ್‌ಫಹಾನ್‌ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ ನಡೆಸಿತ್ತು.
File photo
ಸಂಗ್ರಹ ಚಿತ್ರ
Updated on

ವಿಶ್ವಸಂಸ್ಥೆ: ಇಸ್ರೇಲ್-ಇರಾನ್ ನಡುವಿನ ಸಂಘರ್ಷದಲ್ಲಿ ಇರಾನ್ ರಾಷ್ಟ್ರದ 3 ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿ ಇಸ್ರೇಲ್'ಗೆ ಬೆಂಬಲ ವ್ಯಕ್ತಪಡಿಸಿರುವ ಅಮೆರಿಕಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಶಪಥ ಮಾಡಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಅಮೆರಿಕಕ್ಕೆ ತಕ್ಕ ತಿರುಗೇಟು ನೀಡುವುದಾಗಿ ಇರಾನ್ ಹೇಳಿಕೊಂಡಿದೆ.

ದಾಳಿಯ 'ಸಮಯ, ಸ್ವರೂಪ, ಪ್ರಮಾಣ' ನಾವು ನಿರ್ಧರಿಸುತ್ತೇವೆಂದು ವಿಶ್ವಸಂಸ್ಥೆಯಲ್ಲಿ ಇರಾನ್‌ನ ರಾಯಭಾರಿ ಅಮೀರ್ ಸಯೀದ್ ಇರಾವಿನಿ ಅವರು ಹೇಳಿದ್ದಾರೆ.

ರಾಜತಾಂತ್ರಿಕತೆಯನ್ನು ನಾಶಮಾಡಲು ಅಮೆರಿಕ ನಿರ್ಧರಿಸಿದೆ. ಈಗ ರಾಜತಾಂತ್ರಿಕತೆಯ ಸಮಯ ಮೀರಿದೆ. ಇರಾನ್‌ಗೆ ತನ್ನನ್ನು ರಕ್ಷಿಸಿಕೊಳ್ಳುವ ಎಲ್ಲಾ ಹಕ್ಕಿದೆ ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಇರಾನ್‌ನ ಫೋರ್ಡೊ, ನಟಾನ್ಜ್ ಹಾಗೂ ಎಸ್‌ಫಹಾನ್‌ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ ನಡೆಸಿತ್ತು. ಆ ಮೂಲಕ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷದಲ್ಲಿ ಅಮೆರಿಕ ಅಧಿಕೃತವಾಗಿ ಮಧ್ಯಪ್ರವೇಶ ಮಾಡಿತ್ತು.

ದಾಳಿ ಕುರಿತು ಹೇಳಿಕೆ ನೀಡಿದ್ದ ಟ್ರಂಪ್, ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಹೇಳಿದ್ದರು.

File photo
ಇರಾನ್‌ ಪರಮಾಣು ನೆಲೆಗಳ ಮೇಲೆ ದಾಳಿ: "ಆಡಳಿತ ಬದಲಾವಣೆ" ಸುಳಿವು ನೀಡಿದ ಟ್ರಂಪ್; MIGA ಯೋಜನೆ ಪ್ರಸ್ತಾಪ

ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ತಿಳಿಸಿದ್ದರು.

ಅಲ್ಲದೆ, ಈಗಲೂ ಶಾಂತಿ ಸ್ಥಾಪಿಸದಿದ್ದರೆ ಮತ್ತಷ್ಟು ವಿನಾಶವನ್ನು ಎದುರಿಸಬೇಕಾಗುತ್ತದೆ ಎಂದೂ ಇರಾನ್'ಗೆ ಎಚ್ಚರಿಕೆ ನೀಡಿದ್ದರು.

ಇದಲ್ಲದೆ ಇಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಇರಾನ್ ಅಧಿಕಾರ ಬದಲಾವಣೆ ಕುರಿತು ಸುಳಿವು ನೀಡಿದ್ದಾರೆ.

ಇರಾನ್‌ನಲ್ಲಿ ಆಡಳಿತ ಬದಲಾವಣೆ ಮೂಲಕ ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿ ನೆಲೆಸುವಂತೆ ಮಾಡುವ ಸಾಧ್ಯತೆ ಕುರಿತು ನಾವು ಚಿಂತಿಸುತ್ತಿದ್ದೇವೆ. ಆಡಳಿತ ಬದಲಾವಣೆ ಎಂಬ ಪದವನ್ನು ಬಳಸುವುದು ರಾಜಕೀಯವಾಗಿ ಸರಿಯಲ್ಲ, ಆದರೆ, ಪ್ರಸ್ತುತ ಆಯತೊಲ್ಲಾ ಅಲಿ ಖಮೇನಿ ಆಡಳಿತ ಇರಾನ್‌ನ್ನು ಮತ್ತೆ ಶ್ರೇಷ್ಠಗೊಳಿಸಲು (Make Iran Great Again-MIGA) ಸಾಧ್ಯವಾಗದಿದ್ದರೆ, ಆಡಳಿತ ಬದಲಾವಣೆ ಬಗ್ಗೆ ಏಕೆ ಚಿಂತಿಸಬಾರದು? ಎಂದು ಹೇಳಿದ್ದಾರೆ.

ಈ ನಡುವೆ ಇರಾನ್‌ ವಿದೇಶಾಂಗ ಸಚಿವ ಅಬ್ಬಾಸ್‌ ಅರಾಗ್ಚಿ, ಮಾಸ್ಕೊಗೆ ತೆರಳಲಿದ್ದು, ರಷ್ಯಾ ಜೊತೆ ಸಮನ್ವಯ ಸಾಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕಾ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್‌ಕಿಯಾನ್, ಕಾರ ತೀರಿಸುವುದಾಗಿ ಹೇಳಿದ್ದಾರೆ.

ಅಮೆರಿಕ 'ನಮ್ಮ ಮೇಲೆ ದಾಳಿ ನಡೆಸಿದೆ. ಅಂತಹ ಪರಿಸ್ಥಿತಿಯಲ್ಲಿ ನೀವು ಏನು ಮಾಡುತ್ತೀರಿ? ಸಹಜವಾಗಿಯೇ ದಾಳಿಯಿಂದಲೇ ಉತ್ತರ ನೀಡಬೇಕು' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com