'ಕದನ ವಿರಾಮಕ್ಕೆ ಒಪ್ಪಿಲ್ಲ': ಟ್ರಂಪ್ ಹೇಳಿಕೆ ಬೆನ್ನಲ್ಲೇ ಉಲ್ಟಾ ಹೊಡೆದ ಇರಾನ್: ಇಸ್ರೇಲ್ ಮೊದಲು ದಾಳಿ ನಿಲ್ಲಿಸಲಿ ಎಂದು ಪಟ್ಟು!

ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ.
Israel-Iran conflict
ಇಸ್ರೇಲ್- ಇರಾನ್ ಕದನ online desk
Updated on

ಟೆಹರಾನ್: ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮ ಒಪ್ಪಂದಕ್ಕೆ ಬಂದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದು, ಇದರ ಬೆನ್ನಲ್ಲೇ ಇರಾನ್ ಇದೀಗ ಉಲ್ಟಾ ಹೊಡೆದಿದೆ. ಟ್ರಂಪ್ ಅವರ ಹೇಳಿಕೆಯನ್ನು ನಿರಾಕರಿಸಿರುವ ಇರಾನ್, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ. ಇಸ್ರೇಲ್ ತನ್ನ ಕಾನೂನುಬಾಹಿರ ಆಕ್ರಮಣವನ್ನು ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವ ಉದ್ದೇಶ ಹೊಂದಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಪೋಸ್ಟ್ ಮಾಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವ ಸಂಪೂರ್ಣ ಕದನ ವಿರಾಮ ಒಪ್ಪಂದವಾಗಿದೆ ಎಂದು ಘೋಷಿಸಿದ್ದರು.

ಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ ಎಂದು ಹೇಳಿದ್ದರು.

Israel-Iran conflict
Iran-Israel war: ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com