
ನ್ಯೂಯಾರ್ಕ್: ಅಮೆರಿಕಾದಿಂದ ಉಡಾವಣೆಯಾಗಿದ್ದ Axiom4 Mission ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿದ್ದು, ಡಾಕಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ.
ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ Axiom4 Mission ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಸುಮಾರು 41 ವರ್ಷದ ನಂತರ ಬಾಹ್ಯಾಕಾಶ ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ.
'ಆಕ್ತಿಯೋಂ-4' ಮಿಷನ್ ನ ಭಾಗವಾಗಿ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇವರನ್ನು ಹೊತ್ತ ಸ್ಪೇಸ್ ಎಕ್ಸ್‌ನ ಫಾಲ್ಕನ್ -9 ರಾಕೆಟ್, ಭಾರತೀ ಯ ಕಾಲಮಾನ ಮಧ್ಯಾಹ್ನ 12.01ಕ್ಕೆ ನಭಕ್ಕೆ ಚಿಮ್ಮಿತ್ತು.
ಗಗನಯಾತ್ರಿಗಳು 60ಕ್ಕೂ ಅಧಿಕ ಪ್ರಯೋಗಗಳನ್ನು ಕೈಗೊಳ್ಳಲಿದ್ದಾರೆ. ಈ ಪೈಕಿ ಶುಭಾಂಶು ಶುಕ್ಲಾ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪರ 7 ಅಧ್ಯಯನ ನಡೆಸಲಿದ್ದಾರೆ. ಇವು ಭವಿಷ್ಯದಲ್ಲಿ ಭಾರತದ ಅಂತರಿಕ್ಷಯಾನಕ್ಕೆ ನೆರವಾಗಲಿವೆ.
Advertisement