Pakistan Train Hijack: ಭದ್ರತಾ ಪಡೆಗಳಿಂದ 27 ಭಯೋತ್ಪಾದಕರ ಹತ್ಯೆ,155 ಪ್ರಯಾಣಿಕರ ರಕ್ಷಣೆ

ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ನಂತರ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ದಾಳಿಯ ಹೊಣೆಯನ್ನು ಹೊತ್ತುಕೊಂಡಿತು.
Relatives of passengers of a train, which is attacked by insurgents,
ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸಂಬಂಧಿಕರು
Updated on

ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆಯ ವೇಳೆ 37 ಪ್ರಯಾಣಿಕರು ಗಾಯಗೊಂಡಿದ್ದು, ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಒಂಬತ್ತು ಬೋಗಿಗಳಿರುವ ಜಾಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸುಮಾರು 400 ಪ್ರಯಾಣಿಕರು ಸಂಚರಿಸುತ್ತಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ದಾಳಿಯ ಹೊಣೆ ಹೊತ್ತುಕೊಂಡಿತ್ತು.

ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯ ನಡುವೆಯೂ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ.

Relatives of passengers of a train, which is attacked by insurgents,
Pakistan: ಜಾಫರ್ ಎಕ್ಸ್‌ಪ್ರೆಸ್ ರೈಲು 'ಹೈಜಾಕ್' ಮಾಡಿದ ಉಗ್ರರು; 182 ಜನರ ಒತ್ತೆ, 20 ಯೋಧರ ಹತ್ಯೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com