ನೊಬೆಲ್ ಶಾಂತಿ ಪ್ರಶಸ್ತಿಗೆ ಜೈಲು ಹಕ್ಕಿ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಮನಿರ್ದೇಶನ!

ಇಮ್ರಾನ್ ಖಾನ್ ಭ್ರಷ್ಟಾಚಾರ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ದೀರ್ಘಕಾಲ ಪಾಕಿಸ್ತಾನದ ಜೈಲಿನಲ್ಲಿದ್ದಾರೆ.
imran khan
ಇಮ್ರಾನ್ ಖಾನ್
Updated on

ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸ್ಥಾಪಕ ಇಮ್ರಾನ್ ಖಾನ್ ಅವರ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಸ್ತುತ, ಇಮ್ರಾನ್ ಖಾನ್ ಭ್ರಷ್ಟಾಚಾರ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ದೀರ್ಘಕಾಲ ಪಾಕಿಸ್ತಾನದ ಜೈಲಿನಲ್ಲಿದ್ದಾರೆ. ಅವರ ವಿರುದ್ಧದ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇವೆ. ಇಮ್ರಾನ್ ಎರಡನೇ ಬಾರಿಗೆ ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವಕ್ಕಾಗಿ ಇಮ್ರಾನ್ ಖಾನ್ ಅವರ ಹೋರಾಟಕ್ಕಾಗಿ 2024ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ನಾರ್ವೇಜಿಯನ್ ರಾಜಕೀಯ ಪಕ್ಷ ಪಾರ್ಟಿಯೆಟ್ ಸೆಂಟ್ರಮ್ ಮತ್ತು ಪಾಕಿಸ್ತಾನ್ ವರ್ಲ್ಡ್ ಅಲೈಯನ್ಸ್ ಜಂಟಿಯಾಗಿ ಈ ನಾಮನಿರ್ದೇಶನವನ್ನು ಮಾಡಿವೆ.

ದಕ್ಷಿಣ ಏಷ್ಯಾದಲ್ಲಿ ಶಾಂತಿಯುತ ಪ್ರಯತ್ನಗಳಿಗಾಗಿ, ವಿಶೇಷವಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅವರ ಉಪಕ್ರಮಕ್ಕಾಗಿ ಇಮ್ರಾನ್ ಖಾನ್ ಅವರನ್ನು 2019ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿತ್ತು. ಆದಾಗ್ಯೂ, ಈ ಬಾರಿ ಪ್ರಜಾಪ್ರಭುತ್ವ ಹಕ್ಕುಗಳು ಮತ್ತು ಮಾನವ ಹಕ್ಕುಗಳಿಗಾಗಿ ಅವರ ಹೋರಾಟವನ್ನು ಪ್ರಧಾನವಾಗಿ ಮಾಡಲಾಗಿದೆ.

imran khan
ಭಾರತ ವಿರೋಧಿಗಳ ಬೇಟೆ: ಉಗ್ರ Hafiz Saeed ಸಂಬಂಧಿ Qari Abdu Rehman 'ಅಪರಿಚಿತ ಬಂದೂಕುಧಾರಿ' ದಾಳಿಗೆ ಬಲಿ! Video

2023ರ ಆಗಸ್ಟ್ ನಿಂದ ಇಮ್ರಾನ್ ಖಾನ್ ಜೈಲಿನಲ್ಲಿದ್ದಾರೆ. ಭ್ರಷ್ಟಾಚಾರ, ರಾಷ್ಟ್ರೀಯ ಗೌಪ್ಯತೆಯ ಉಲ್ಲಂಘನೆ ಮತ್ತು ಅಕ್ರಮ ವಿವಾಹ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ. 2024ರ ಜನವರಿಯಲ್ಲಿ ಅಧಿಕಾರ ದುರುಪಯೋಗದ ಪ್ರಕರಣದಲ್ಲಿ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಆದಾಗ್ಯೂ, ಈ ಎಲ್ಲಾ ಆರೋಪಗಳು ರಾಜಕೀಯ ದ್ವೇಷದ ಭಾಗವಾಗಿದೆ ಎಂದು ಅವರ ಬೆಂಬಲಿಗರು ಹೇಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com