ಎಸ್ ಜೈಶಂಕರ್ ಜೊತೆ ಮಾರ್ಕೊ ರೂಬಿಯೊ ಮಾತುಕತೆ: ಭಯೋತ್ಪಾದನೆ ವಿರುದ್ಧ ಅಮೆರಿಕ ಬದ್ಧತೆ ಪುನರುಚ್ಛಾರ

ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಏಪ್ರಿಲ್ 27-28ರ ರಾತ್ರಿ ನಡೆದ ಕದನ ವಿರಾಮ ಉಲ್ಲಂಘನೆಗೆ ಸೇನೆಯು ತ್ವರಿತವಾಗಿ ಪ್ರತಿಕ್ರಿಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
External Affairs Minister S Jaishankar with newly appointed US Secretary of State Marco Rubio.
ಅಮೆರಿಕದ ನೂತನ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್.
Updated on

ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ನಿನ್ನೆ ಸಾಯಂಕಾಲ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿ, ಭಯೋತ್ಪಾದನೆಯ ವಿರುದ್ಧ ಭಾರತದೊಂದಿಗೆ ಸಹಕಾರ ನೀಡುವ ಅಮೆರಿಕದ ಬದ್ಧತೆಯನ್ನು ಪುನರುಚ್ಚರಿಸಿದರು.

ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಜೀವಗಳಿಗೆ ಸಂತಾಪ ಸೂಚಿಸಿದ ರುಬಿಯೊ, ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನದೊಂದಿಗೆ ಕೆಲಸ ಮಾಡುವಂತೆ ಭಾರತವನ್ನು ಪ್ರೋತ್ಸಾಹಿಸಿದರು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕ್ರೂರ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ (LoC) ಉದ್ದಕ್ಕೂ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು 26 ಜನರನ್ನು ಕೊಂದು, ಹೆಚ್ಚಾಗಿ ಪ್ರವಾಸಿಗರನ್ನು ಗಾಯಗೊಳಿಸಿದರು.

ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿದೆ, ಅವುಗಳಲ್ಲಿ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿಯಲ್ಲಿರುವ ಸಮಗ್ರ ಚೆಕ್ ಪೋಸ್ಟ್ ನ್ನು ಮುಚ್ಚುವುದು ಸೇರಿವೆ. ಭಾರತವು ಹೈಕಮಿಷನ್‌ಗಳ ಬಲವನ್ನು ಮೊಟಕುಗೊಳಿಸಲು ಸಹ ನಿರ್ಧರಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆ ನೀಡಲು ಸರ್ಕಾರ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯವನ್ನು ನೀಡಿದೆ. ಗಡಿಯಾದ್ಯಂತ ಪಾಕಿಸ್ತಾನ ಸೇನೆಯ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದೆ.

External Affairs Minister S Jaishankar with newly appointed US Secretary of State Marco Rubio.
ಪಹಲ್ಗಾಮ್ ದಾಳಿ ನಂತರ ಸೇನಾ ಕಮಾಂಡರ್ 'ತೆಗೆದುಹಾಕಲಾಗಿದೆ' ಎಂಬುದು ಫೇಕ್: ಸರ್ಕಾರ ಸ್ಪಷ್ಟನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಏಪ್ರಿಲ್ 27-28ರ ರಾತ್ರಿ ನಡೆದ ಕದನ ವಿರಾಮ ಉಲ್ಲಂಘನೆಗೆ ಸೇನೆಯು ತ್ವರಿತವಾಗಿ ಪ್ರತಿಕ್ರಿಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 26-27ರ ರಾತ್ರಿ ಟುಟ್ಮರಿ ಗಾಲಿ ಮತ್ತು ರಾಂಪುರ ಸೆಕ್ಟರ್‌ಗಳ ಎದುರಿನ ಪ್ರದೇಶಗಳಲ್ಲಿ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com