Operation Sindoor: 'ಪಾಪಾ.. ಹುತಾತ್ಮರು...'; LIVE ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪಾಕಿಸ್ತಾನಿ News Anchor

ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
Pakistani News Anchor Breaks Down On LIVE TV
ಲೈವ್ ನಲ್ಲೇ ಅತ್ತ ಸುದ್ದಿ ನಿರೂಪಕಿ
Updated on

ಲಾಹೋರ್: ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಅದರ ಪರಿಣಾಮ ಸುದ್ದಿವಾಹಿನಿಗಳ ಮೇಲೂ ಆಗಿದೆ.

ಹೌದು.. 26 ಮಂದಿ ಭಾರತೀಯರ ಧಾರುಣ ಸಾವಿಗೆ ಕಾರಣವಾದ ಜಮ್ಮು ಮತ್ತು ಕಾಶ್ಮೀರದ ಅನಂತ್​​ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನ ಉಗ್ರ ತಾಣಗಳ ವಿರುದ್ಧ ಆಪರೇಷನ್ ಸಿಂಧೂರ್ (Operation Sindoor) ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು.

ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ 9 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿದೆ.

ಈ ಪೈಕಿ ನಾಲ್ಕು ಪಾಕಿಸ್ತಾನದ ಮುಖ್ಯ ಭೂಭಾಗದಲ್ಲಿ ಮತ್ತು ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ. ಈ ನಿರ್ದಿಷ್ಛ ದಾಳಿಯಲ್ಲಿ ಭಾರತೀಯ ಸೇನೆ ಯಾವುದೇ ಪಾಕಿಸ್ತಾನಿ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ. ಬದಲಾಗಿ, ನಿಷೇಧಿತ ಭಯೋತ್ಪಾದಕ ಗುಂಪುಗಳು ಕಾರ್ಯಾಚರಣೆ ಕೇಂದ್ರಗಳಾಗಿ ಬಳಸಿದ ಪರಿಶೀಲಿಸಿದ ಆಧಾರದ ಮೇಲೆ ಎಲ್ಲಾ ತಾಣಗಳನ್ನು ಆಯ್ಕೆ ಮಾಡಲಾಗಿತ್ತು ಎಂದು ಹೇಳಿದೆ.

ಲೈವ್ ಕಾರ್ಯಕ್ರಮದಲ್ಲೇ ಬಿಕ್ಕಿ ಬಿಕ್ಕಿ ಅತ್ತ ಸುದ್ದಿ ನಿರೂಪಕಿ

ಈ ನಡುವೆ ಪಾಕ್ ಭಾರತದ ದಾಳಿಯಿಂದ ನಲುಗಿ ಹೋಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಭಾರತದ ಸೇನಾ ದಾಳಿ ಬಳಿಕ ಪಾಕಿಸ್ತಾನದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಪಾಕಿಸ್ತಾನಿ ಸುದ್ದಿನಿರೂಪಕಿ ಲೈವ್ ನಲ್ಲಿ ಅಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿವೆ.

@Incognito_qfs ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ವೈರಲ್ ಆಗಿರುವ ವಿಡಿಯೋ ದಲ್ಲಿ ಪಾಕಿಸ್ತಾನಿ ಸುದ್ದಿ ನಿರೂಪಕಿ ಲೈವ್ ನಲ್ಲಿ ಅಳುತ್ತಿರುವುದನ್ನು ಕಾಣಬಹುದು. ಇಲ್ಲಿನ ಅಮಾಯಕ ಜನರನ್ನು ಅಲ್ಲಾನೆ ಕಾಪಾಡಬೇಕು, ನಮ್ಮ ಮೇಲೆ ದೇವರೇ ಕರುಣೆ ತೋರಬೇಕು. ಅಮಾಯಕ ಜನರು ಹುತಾತ್ಮರಾಗಿದ್ದಾರೆ ಎಂದು ಬಿಕ್ಕಿ ಬಿಕ್ಕಿ ಅಳುತ್ತಾ ಹೇಳುತ್ತಿರುವುದನ್ನು ನೋಡಬಹುದು.

Pakistani News Anchor Breaks Down On LIVE TV
Operation Sindoor: ಜೈಷ್, ಎಲ್‌ಇಟಿ, ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗಳ ಕೇಂದ್ರ ಕಚೇರಿಗಳ ಮೇಲೆ IAF ಟಾರ್ಗೆಟ್; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com