ಭಾರತ-ಪಾಕ್ ಉದ್ವಿಗ್ನತೆ: ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ಭಾರತ ಮತ್ತು ಪಾಕಿಸ್ತಾನವನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಎರಡೂ ದೇಶಗಳಿಂದ ಪರಮಾಣು ದಾಳಿಯಾದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ನಮಗೆ ಕಳವಳವಿದೆ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗುರುವಾರ ಹೇಳಿದ್ದಾರೆ.
ಜೆಡಿ ವ್ಯಾನ್ಸ್
ಜೆಡಿ ವ್ಯಾನ್ಸ್
Updated on

ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಯುದ್ಧದಲ್ಲಿ ಭಾಗಿಯಾಗುವುದಿಲ್ಲ, ಮೂಲಭೂತವಾಗಿ ನಮಗೂ ಇದಕ್ಕೂ ಸಂಬಂಧವಿಲ್ಲ ಎಂದು ಅಮೆರಿಕ ಹೇಳಿದೆ.

ಭಾರತ ಮತ್ತು ಪಾಕಿಸ್ತಾನವನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಎರಡೂ ದೇಶಗಳಿಂದ ಪರಮಾಣು ದಾಳಿಯಾದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ನಮಗೆ ಕಳವಳವಿದೆ. ಪರಮಾಣು ಶಸ್ತ್ರಸಜ್ಜಿತ ಉಭಯ ರಾಷ್ಟ್ರಗಳ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಾವು ಪ್ರಯತ್ನಿಸಬಹುದು ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗುರುವಾರ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಎರಡು ಪರಮಾಣು ಶಕ್ತಿಗಳು ಡಿಕ್ಕಿ ಹೊಡೆದು ಉಂಟಾಗುವ ದೊಡ್ಡ ಸಂಘರ್ಷದ ಬಗ್ಗೆ ನಾವು ಕಳವಳಗೊಂಡಿದ್ದೇವೆ. ಸಾಧ್ಯವಾದಷ್ಟು ಬೇಗ ಉದ್ವಿಗ್ನತೆ ಕುಗ್ಗಲಿ ಎಂದು ಅಮೆರಿಕ ಬಯಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ.

'ನಾವು ಯಾವ ದೇಶವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಮೂಲಭೂತವಾಗಿ, ಭಾರತವು ಪಾಕಿಸ್ತಾನದ ಮೇಲೆ ತನ್ನ ಹಿಡಿತವನ್ನು ಹೊಂದಿದೆ. ಪಾಕಿಸ್ತಾನವು ಭಾರತಕ್ಕೆ ಪ್ರತಿಕ್ರಿಯಿಸಿದೆ. ಈ ಸಮಯದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಾವು ಏನೆಲ್ಲ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇವೆ. ಆದರೆ, ನಾವು ಈ ಯುದ್ಧದಲ್ಲಿ ಭಾಗಿಯಾಗುವುದಿಲ್ಲ. ಅದು ನಮಗೆ ಸಂಬಂಧಿಸದ ವಿಚಾರವಾಗಿದೆ. ಅಮೆರಿಕದ ನಿಯಂತ್ರಣ ಸಾಮರ್ಥ್ಯದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ' ಎಂದು ವ್ಯಾನ್ಸ್ ಹೇಳಿದ್ದಾರೆ.

'ಶಸ್ತ್ರಾಸ್ತ್ರವನ್ನು ತ್ಯಜಿಸುವಂತೆ ಅಮೆರಿಕವು ಭಾರತಕ್ಕಾಗಲೀ ಅಥವಾ ಪಾಕಿಸ್ತಾನಕ್ಕಾಗಲೀ ಹೇಳಲು ಸಾಧ್ಯವಿಲ್ಲ. ಆದ್ದರಿಂದ ನಾವು ರಾಜತಾಂತ್ರಿಕ ಮಾರ್ಗಗಳ ಮೂಲಕವೇ ಈ ವಿಷಯವನ್ನು ತೆಗೆದುಕೊಳ್ಳುತ್ತೇವೆ. ಇದು ಪ್ರಾದೇಶಿಕ ಸಂಘರ್ಷವಾಗುವಷ್ಟು ಅಥವಾ ಪರಮಾಣು ಸಂಘರ್ಷವಾಗಿ ಬದಲಾಗದಿರಲಿ ಎಂಬುದು ನಮ್ಮ ಆಶಯ ಮತ್ತು ನಿರೀಕ್ಷೆಯಾಗಿದೆ. ಆದರೆ, ಖಂಡಿತವಾಗಿಯೂ, ನಾವು ಈ ಬಗ್ಗೆ ಚಿಂತಿತರಾಗಿದ್ದೇವೆ' ಎಂದರು.

ಜೆಡಿ ವ್ಯಾನ್ಸ್
Watch | ಇದು ಬೇಗ ಮುಗಿಯಲಿ ಎಂದು ನಾನು ಆಶಿಸುತ್ತೇನೆ: ಟ್ರಂಪ್

'ಭಾರತ ಮತ್ತು ಪಾಕಿಸ್ತಾನದಲ್ಲಿನ ರಾಜತಾಂತ್ರಿಕ ಮುಖ್ಯಸ್ಥರು ಪರಮಾಣು ಯುದ್ಧವಾಗಿ ಬದಲಾಗದಂತೆ ನೋಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಒಂದು ವೇಳೆ ಅಣ್ವಸ್ತ್ರ ಯುದ್ಧವಾದರೆ, ಅದು ವಿನಾಶಕಾರಿಯಾಗಿರಲಿದೆ. ಹೀಗಾಗಿ, ಅದು ಸಂಭವಿಸುತ್ತದೆ ಎಂದು ನಾವು ಭಾವಿಸುವುದಿಲ್ಲ' ಎಂದು ಅವರು ಹೇಳಿದರು.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ವೇಳೆ ವ್ಯಾನ್ಸ್, ಎರಡನೇ ಮಹಿಳೆ ಉಷಾ ವ್ಯಾನ್ಸ್ ಮತ್ತು ಅವರ ಮೂವರು ಮಕ್ಕಳು ಭಾರತಕ್ಕೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com