ಭಾರತ ಮತ್ತು ಪಾಕಿಸ್ತಾನ ಶಾಂತಿ, ಸಂಯಮದಿಂದ ವರ್ತಿಸಬೇಕು; ಚೀನಾ ಒತ್ತಾಯ

ಭಾರತ ಮತ್ತು ಪಾಕಿಸ್ತಾನದ ನಡುವಿನ ಸದ್ಯದ ಪರಿಸ್ಥಿತಿಯನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುವಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ರಷ್ಯಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್
ರಷ್ಯಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್
Updated on

ಬೀಜಿಂಗ್: ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಮಿಲಿಟರಿ ಸಂಘರ್ಷ ಉಲ್ಬಣಗೊಳ್ಳುತ್ತಿರುವ ವರದಿಗಳ ಮಧ್ಯೆ, ಶಾಂತಿ ಮತ್ತು ಸಂಯಮವನ್ನು ಕಾಯ್ದುಕೊಳ್ಳಬೇಕು ಮತ್ತು ಉಭಯ ದೇಶಗಳು ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಚೀನಾ ಶನಿವಾರ ಒತ್ತಾಯಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಸದ್ಯದ ಪರಿಸ್ಥಿತಿಯನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುವಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

'ಶಾಂತಿ ಮತ್ತು ಸ್ಥಿರತೆಯ ವಿಶಾಲ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸಲು, ಸಂಯಮ ಕಾಪಾಡಿಕೊಳ್ಳಲು, ಶಾಂತಿಯುತ ಮಾರ್ಗಗಳ ಮೂಲಕ ಸಮಸ್ಯೆಯ ಇತ್ಯರ್ಥದ ಹಾದಿಗೆ ಮರಳಲು ಮತ್ತು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುವ ಯಾವುದೇ ಕ್ರಮದಿಂದ ದೂರವಿರಲು ನಾವು ಎರಡೂ ಕಡೆಯವರನ್ನು ಬಲವಾಗಿ ಒತ್ತಾಯಿಸುತ್ತೇವೆ' ಎಂದು ಸಚಿವಾಲಯದ ವಕ್ತಾರರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ವರದಿಗಳು ಮತ್ತು ಮಿತ್ರ ರಾಷ್ಟ್ರ ಎಂದು ಕರೆಯುವ ಪಾಕಿಸ್ತಾನದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, 'ಭಾರತ ಮತ್ತು ಪಾಕಿಸ್ತಾನ ಎರಡರ ಮೂಲಭೂತ ಹಿತಾಸಕ್ತಿಗೆ ಮತ್ತು ಸ್ಥಿರ ಮತ್ತು ಶಾಂತಿಯುತ ಪ್ರದೇಶಕ್ಕೆ ಇದು ಮುಖ್ಯವಾಗಿರುತ್ತದೆ. ಅಂತರರಾಷ್ಟ್ರೀಯ ಸಮುದಾಯ ಕೂಡ ಇದನ್ನೇ ನೋಡಲು ಆಶಿಸುತ್ತಿದೆ. ಈ ನಿಟ್ಟಿನಲ್ಲಿ ಚೀನಾ ರಚನಾತ್ಮಕ ಪಾತ್ರವನ್ನು ವಹಿಸುವುದನ್ನು ಮುಂದುವರಿಸಲು ಸಿದ್ಧವಾಗಿದೆ' ಎಂದು ಅದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸಿದ್ದು, ಆದರೆ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸದಂತೆ ಮತ್ತು ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ತನಿಖೆಗೆ ಒತ್ತಾಯಿಸಿತು.

ರಷ್ಯಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್
ಭಾರತ ದಾಳಿ ನಿಲ್ಲಿಸಿದರೆ, ಉದ್ವಿಗ್ನತೆಯನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸುತ್ತೇವೆ: ಪಾಕಿಸ್ತಾನ ವಿದೇಶಾಂಗ ಸಚಿವ

ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com