'ಸದ್ಯಕ್ಕೆ' ಅಣ್ವಸ್ತ್ರ ಬಳಸಲ್ಲ..'; ಪಾಕಿಸ್ತಾನ ರಕ್ಷಣಾ ಸಚಿವ Khawaja Asif
ಇಸ್ಲಾಮಾಬಾದ್: ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ಭುಗಿಲೆದ್ದಿದ್ದು, ಸದ್ಯಕ್ಕೆ ಭಾರತದ ವಿರುದ್ಧ ಅಣ್ವಸ್ತ್ರಗಳನ್ನು ಬಳಸಲ್ಲ ಎಂದು ಪಾಕಿಸ್ತಾನ ಹೇಳಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗಿರುವಂತೆಯೇ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್, 'ಭಾರತ ಮತ್ತು ಪಾಕಿಸ್ತಾನಿ ಸೇನೆಗಳು ಪರಸ್ಪರರ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಈಗಾಗಲೇ ಗಂಭೀರವಾಗಿರುವ ಘರ್ಷಣೆಯನ್ನು ಇನ್ನಷ್ಟು ಹೆಚ್ಚಿಸಿದೆ. ಆದಾಗ್ಯೂ ಈಗ ಪರಮಾಣು ಆಯ್ಕೆ ಸಿದ್ಧವಾಗಿಲ್ಲ. ಆದಾಗ್ಯೂ, ಪರಿಸ್ಥಿತಿ ಬಂದರೆ 'ವೀಕ್ಷಕರ' ಮೇಲೂ ಪರಿಣಾಮ ಬೀರುತ್ತದೆ" ಎಂದು ಹೇಳಿದ್ದಾರೆ.
ಜಿಯೋ ನ್ಯೂಸ್ ಜೊತೆ ಮಾತನಾಡಿರುವ ಖವಾಜಾ ಆಸಿಫ್, 'ಈ ಅಣ್ವಸ್ತ್ರ ಕೇವಲ ಪ್ರದೇಶಕ್ಕೆ ಸೀಮಿತವಾಗಿಲ್ಲ, ಇದು ಹೆಚ್ಚು ವಿಸ್ತಾರವಾಗಬಹುದು ಎಂದು ನಾನು ಜಗತ್ತಿಗೆ ಹೇಳುತ್ತಿದ್ದೇನೆ... ಈ ವಿನಾಶ. ಭಾರತ ಸೃಷ್ಟಿಸುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ ನಮ್ಮ ಆಯ್ಕೆಗಳನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಅಂದಹಾಗೆ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳ ಕುರಿತು ಕಾರ್ಯಾಚರಣೆಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಎನ್‌ಸಿಎ ಹೊಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ