ಪೆನ್ಸಿಲ್ವೇನಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವು
ನ್ಯೂಯಾರ್ಕ್: ಪೆನ್ಸಿಲ್ವೇನಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಮಾನವ್ ಪಟೇಲ್ (20) ಮತ್ತು ಸೌರವ್ ಪ್ರಭಾಕರ್ (23) ಎಂದು ಗುರುತಿಸಲಾಗಿದೆ. ವಾಹನದ ಮುಂಭಾಗದ ಸೀಟಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರು ಮರಕ್ಕೆ ಡಿಕ್ಕಿ ಹೊಡೆದು, ಬಳಿಕ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮೃತರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದೆ.
ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಗಳೊಂದಿಗೆ ಸಂತಾಪ ಸೂಚಿಸುತ್ತೇವೆಂದು ರಾಯಭಾರ ಕಚೇರಿ ಹೇಳಿದೆ.