ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ರಾಜೀನಾಮೆ?

ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರಲು ವಿಫಲವಾದ ಕಾರಣ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಮೊಹಮ್ಮದ್ ಯೂನಸ್
ಮೊಹಮ್ಮದ್ ಯೂನಸ್
Updated on

ಢಾಕಾ: ಮುಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರ ಮತ್ತು ಬಾಂಗ್ಲಾದೇಶ ಸೇನೆಯ ನಡುವಿನ ಸಂಘರ್ಷ ಈಗಾಗಲೇ ಬಹಿರಂಗವಾಗಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ರಾಜೀನಾಮೆ ನೀಡುವ ವಿಚಾರ ಮುನ್ನೆಲೆಗೆ ಬಂದಿದ್ದು ರಾಜಕೀಯ ಪಕ್ಷಗಳಲ್ಲಿ ಒಮ್ಮತದ ಕೊರತೆಯಿಂದಾಗಿ ಕೆಲಸ ಮಾಡುವುದು ಕಷ್ಟಕರವಾಗುತ್ತಿದೆ ಎಂದು ಯೂನಸ್ ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರಲು ವಿಫಲವಾದ ಕಾರಣ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳೇ ರೂಪಿಸಿರುವ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್‌ಸಿಪಿ) ಸಂಚಾಲಕ ನಹಿದ್ ಇಸ್ಲಾಂ ತಿಳಿಸಿರುವುದಾಗಿ ಬಿಬಿಸಿ ಬಾಂಗ್ಲಾ ವರದಿ ಮಾಡಿದೆ.

ಇಂದು ಬೆಳಿಗ್ಗೆಯಿಂದ ಮೊಹಮ್ಮದ್ ಯೂನಸ್ ಅವರ ರಾಜೀನಾಮೆ ಸುದ್ದಿ ಕೇಳಿ ಬರುತ್ತಿದೆ. ಇದೇ ವಿಚಾರದ ಬಗ್ಗೆ ಚರ್ಚಿಸಲು ನಾನು ಅವರನ್ನು ಭೇಟಿ ಮಾಡಿದ್ದೆ. ಸದ್ಯದ ಪರಿಸ್ಥಿತಿಗೆ ಅಧರಿಸಿ ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಅವರು ಹೇಳಿದರು, ವಿಶ್ವಾಸ- ಭರವಸೆಯ ಸ್ಥಾನ ಅವರಿಗೆ ಸಿಗದಿದ್ದರೆ ಅವರು ಏಕೆ ಅಲ್ಲಿಯೇ ಇರುತ್ತಾರೆ?" ಎಂದು ನಹಿದ್ ಇಸ್ಲಾಂ ಪ್ರಶ್ನಿಸಿದ್ದಾರೆ.

ದೇಶದ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರದ ಹೊರತು ನಾನು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಯೂನಸ್ ತಿಳಿಸಿರುವುದಾಗಿ ಎನ್‌ಸಿಪಿ ಸಂಚಾಲಕ ಹೇಳಿದರು.

ದೇಶದ ಭದ್ರತೆ ಮತ್ತು ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸುವುದರ ಜತೆಗೆ ಸಹಕಾರ ನೀಡುವ ಭರವಸೆ ಇದೆ ಎಂದು ಯೂನಸ್ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಇಸ್ಲಾಂ ತಿಳಿಸಿದ್ದಾರೆ.

ದೇಶದಲ್ಲಿ ನಡೆದ ಸಾಮೂಹಿಕ ದಂಗೆಯ ಬಳಿಕ ದೇಶದಲ್ಲಿ ಬದಲಾವಣೆ ಮತ್ತು ಸುಧಾರಣೆಗಾಗಿ ಯೂನಸ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಕರೆತರಲಾಯಿತು. ಆದರೆ ಈಗ, ವಿವಿಧ ರಾಜಕೀಯ ಪಕ್ಷಗಳು ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿಯನ್ನು ಸೃಷ್ಟಿಸಿವೆ. ಇದರಿಂದ ಯೂನಸ್ ಅವರ ಕೈಗೆ ಕೋಳ ಹಾಕಲ್ಪಟ್ಟಂತಾಗಿದೆ ಯಾವುದೇ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿ ಅವರದ್ದಾಗಿದೆ. ಆದರೂ ರಾಜೀನಾಮೆ ನಿರ್ಧಾರ ಕೈಗೊಳ್ಳುವ ಮೊದಲು ಒಮ್ಮೆ ಯೋಚಿಸಿ ಎಂದು ನಹಿದ್ ಇಸ್ಲಾಂ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಅವರು ಬುಧವಾರ ಬಾಂಗ್ಲಾದೇಶದಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಎನ್‌ಪಿ ಜೊತೆ ಕೈಜೋಡಿಸುವ ಮೂಲಕ ಹಂಗಾಮಿ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಕಳೆದ 9 ತಿಂಗಳಿನಿಂದ ದೇಶಕ್ಕೆ ರಕ್ಷಕನಿಲ್ಲ ಹಾಗಾಗಿ ಮುಂದಿನ ಡಿಸೆಂಬರ್ ಒಳಗೆ ಚುನಾವಣೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಈ ಪರಿಸ್ಥಿತಿಯಲ್ಲಿ, ಯೂನಸ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರದ ಕುರಿತು ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಮೊಹಮ್ಮದ್ ಯೂನಸ್
ಪಾಕ್ ಬಳಿಕ ಬಾಲ ಬಿಚ್ಚಿದ ಬಾಂಗ್ಲಾ: ಈಶಾನ್ಯ ರಾಜ್ಯಗಳನ್ನೊಳಗೊಂಡ ಗ್ರೇಟರ್ ಬಾಂಗ್ಲಾದೇಶ ನಕ್ಷೆ ಬಿಡುಗಡೆ; ಟರ್ಕಿ ಕುಮ್ಮಕ್ಕು!

ದೇಶದ ಭದ್ರತೆ ಮತ್ತು ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸುವುದರ ಜತೆಗೆ ಸಹಕಾರ ನೀಡುವ ಭರವಸೆ ಇದೆ ಎಂದು ಯೂನಸ್ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಇಸ್ಲಾಂ ತಿಳಿಸಿದ್ದಾರೆ.

ದೇಶದಲ್ಲಿ ನಡೆದ ಸಾಮೂಹಿಕ ದಂಗೆಯ ಬಳಿಕ ದೇಶದಲ್ಲಿ ಬದಲಾವಣೆ ಮತ್ತು ಸುಧಾರಣೆಗಾಗಿ ಯೂನಸ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಕರೆತರಲಾಯಿತು. ಆದರೆ ಈಗ, ವಿವಿಧ ರಾಜಕೀಯ ಪಕ್ಷಗಳು ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿಯನ್ನು ಸೃಷ್ಟಿಸಿವೆ. ಇದರಿಂದ ಯೂನಸ್ ಅವರ ಕೈಗೆ ಕೋಳ ಹಾಕಲ್ಪಟ್ಟಂತಾಗಿದೆ ಯಾವುದೇ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿ ಅವರದ್ದಾಗಿದೆ. ಆದರೂ ರಾಜೀನಾಮೆ ನಿರ್ಧಾರ ಕೈಗೊಳ್ಳುವ ಮೊದಲು ಒಮ್ಮೆ ಯೋಚಿಸಿ ಎಂದು ನಹಿದ್ ಇಸ್ಲಾಂ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಅವರು ಬುಧವಾರ ಬಾಂಗ್ಲಾದೇಶದಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಎನ್‌ಪಿ ಜೊತೆ ಕೈಜೋಡಿಸುವ ಮೂಲಕ ಹಂಗಾಮಿ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಕಳೆದ 9 ತಿಂಗಳಿನಿಂದ ದೇಶಕ್ಕೆ ರಕ್ಷಕನಿಲ್ಲ ಹಾಗಾಗಿ ಮುಂದಿನ ಡಿಸೆಂಬರ್ ಒಳಗೆ ಚುನಾವಣೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಈ ಪರಿಸ್ಥಿತಿಯಲ್ಲಿ, ಯೂನಸ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರದ ಕುರಿತು ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com