

ಹಾಂಗ್ ಕಾಂಗ್: ಪ್ರವಾಸಿಗರ ನೆಚ್ಚಿನ ತಾಣ ಹಾಂಗ್ ಕಾಂಗ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 32 ಅಂತಸ್ತಿನ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ.
ಹಾಂಗ್ ಕಾಂಗ್‌ನ ಉತ್ತರ ತೈ ಪೊ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಸತತ ಪ್ರಯತ್ನಗಳ ಹೊರತಾಗಿಯೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ.
ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಸುಮಾರು 700 ನಿವಾಸಿಗಳನ್ನು ತಾತ್ಕಾಲಿಕ ಬೇರೆಡೆಗೆ ಸ್ಥಳಾಂತರಿಸಲಾಯಿತು. ಬೆಂಕಿ ಆರಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೂ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ. 9 ಜನರು ಸ್ಥಳದಲ್ಲೇ ಸಾವನ್ನಪ್ಪಿದದು, ಇತರ ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಸೇವೆಗಳ ಇಲಾಖೆ ತಿಳಿಸಿದೆ.
ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ತೀವ್ರಗೊಂಡಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಗಾಯಾಳುಗಳ ಪೈಕಿ ಹಲವರು ಸಾವನ್ನಪ್ಪಿದ್ದಾರೆ.
'ನ್ಯೂ ಟೆರಿಟರೀಸ್' ಬಳಿಯ ಏಳು ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ ಬೆಂಕಿ ಅಕಸ್ಮಾತ್ತಾಗಿ ಹೊತ್ತಿಕೊಂಡಿತ್ತು. ಬೆಂಕಿ ಕೂಡಲೇ ವ್ಯಾಪಿಸಿದ ಪರಿಣಾಮ, ದುರಂತದಲ್ಲಿ 9 ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆಸ್ಪತ್ರೆಗೆ ಕಳುಹಿಸಲಾದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತಪಟ್ಟವರಲ್ಲಿ ಓರ್ವ ಅಗ್ನಿಶಾಮಕ ಸಿಬ್ಬಂದಿಯೂ ಸೇರಿದ್ದಾರೆ. ಹಲವರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಬಿದಿರಿನ ಸ್ಕ್ಯಾಫೋಲ್ಡಿಂಗ್‌ನಲ್ಲಿ ಹೊದಿಸಲಾದ 32 ಅಂತಸ್ತಿನ ಗೋಪುರಗಳಿಂದ ದಟ್ಟವಾದ ಕಪ್ಪು ಹೊಗೆ ಬರುತ್ತಿದ್ದಂತೆ, ಅಗ್ನಿಶಾಮಕ ದಳದವರು ರಾತ್ರಿಯವರೆಗೂ ಕಿತ್ತಳೆ ಬಣ್ಣದ ಜ್ವಾಲೆಗಳನ್ನು ನಂದಿಸುವಲ್ಲಿ ಯಶಸ್ವಿಯಾದರು. ಮಾರ್ಚ್‌ನಲ್ಲಿ ಸರ್ಕಾರ ಸುರಕ್ಷತಾ ಕಾರಣಗಳಿಗಾಗಿ ಮತ್ತು ಹಸಿರು ನಿರ್ಮಾಣ ಜಾಲರಿಯಿಂದ ಇವುಗಳ ಬಳಕೆಯನ್ನು ಹಂತಹಂತವಾಗಿ ತೆಗೆದುಹಾಕಲು ಪ್ರಾರಂಭಿಸಿತು. ಬೆಂಕಿಯ ಕಾರಣ ತಕ್ಷಣವೇ ತಿಳಿದುಬಂದಿಲ್ಲ.
ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಅಧಿಕಾರಿಗಳು ಇದನ್ನು 'ಲೆವೆಲ್ 5 ಅಲರ್ಟ್' ಘೋಷಿಸಿದ್ದರು. ರಾತ್ರಿಯಾದರೂ ಬೆಂಕಿ ಉರಿಯುತ್ತಲೇ ಇತ್ತು. ಸುಮಾರು 700 ಜನರನ್ನು ತಾತ್ಕಾಲಿಕ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ 128 ಅಗ್ನಿಶಾಮಕ ವಾಹನಗಳು ಮತ್ತು 57 ಆಂಬ್ಯುಲೆನ್ಸ್‌ಗಳನ್ನು ರವಾನಿಸಲಾಗಿದೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ.
ಬಹು ಮಹಡಿ ವಸತಿ ಸಮುಚ್ಚಯ
ಏಳು ಬಹುಮಹಡಿಯ ವಸತಿ ಸಮುಚ್ಚಯವು 8 ಬ್ಲಾಕ್‌ಗಳನ್ನು ಹೊಂದಿದ್ದು, ಸುಮಾರು 2,000 ಫ್ಲಾಟ್‌ಗಳಿವೆ. ಇಲ್ಲಿ ಅಂದಾಜು 4,800 ಜನರು ವಾಸಿಸುತ್ತಿದ್ದಾರೆ. ಕಟ್ಟಡದೊಳಗೆ ಸಿಕ್ಕಿಬಿದ್ದವರಲ್ಲಿ ಬಹುತೇಕರು ವೃದ್ಧರು ಎಂದು ತೈ ಪೊ ಜಿಲ್ಲಾ ಮಂಡಳಿ ಸದಸ್ಯ ಲೊ ಹಿಯು-ಫಂಗ್ ಮಾಹಿತಿ ಹಂಚಿಕೊಂಡಿದ್ದಾರೆ.
Advertisement