Israel-Gaza ಯುದ್ಧ ಕೊನೆಗೂ ಅಂತ್ಯ: ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ, ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

2023ರ ಅಕ್ಟೋಬರ್‌ ನಿಂದ ಇಸ್ರೇಲ್ ನಡೆಸಿದ ಗಾಝಾ ಯುದ್ಧದಲ್ಲಿ ಕನಿಷ್ಠ 67,183 ಮಂದಿ ಮೃತಪಟ್ಟಿದ್ದು, 169,841 ಮಂದಿ ಗಾಯಗೊಂಡಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಎರಡು ವರ್ಷಗಳ ಕಾಲ ನಡೆದ ಯುದ್ಧ ಇದೀಗ ಕೊನೆಗೂ ಅಂತ್ಯಗೊಂಡಿದೆ.

ಇಸ್ರೇಲ್ ಮತ್ತು ಹಮಾಸ್ ಗಾಝಾ ಕದನ ವಿರಾಮ ಯೋಜನೆಯ ಮೊದಲ ಹಂತಕ್ಕೆ ಒಪ್ಪಂದ ಮಾಡಿಕೊಂಡಿವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಇಸ್ರೇಲ್ ಮತ್ತು ಹಮಾಸ್ ನಡುವೆ ಗಾಝಾದ ಕದನ ವಿರಾಮದ ಮೊದಲ ಹಂತಕ್ಕೆ ಒಪ್ಪಂದ ತಲುಪಿದೆ. ಇದು ಶಾಂತಿಯ ಪ್ರಾರಂಭದ ಹೊಸ ಅಧ್ಯಾಯವಾಗಿದೆ” ಎಂದು ಹೇಳಿದ್ದಾರೆ.

ಇದೇ ವೇಳೆ ಈ ವಾರಾಂತ್ಯದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲು ಈಜಿಪ್ಟ್‌ಗೆ ಭೇಟಿ ನೀಡಲಿದ್ದಾರೆ ಎಂದೂ ತಿಳಿಸಿದ್ದಾರೆ.

ಈ ಒಪ್ಪಂದ 'ಬಲಿಷ್ಠ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆ' ಎಂದು ಬಣ್ಣಿಸಿರುವ ಡೊನಾಲ್ಡ್ ಟ್ರಂಪ್ ಅವರು, ಇದು ಅರಬ್ ಮತ್ತು ಮುಸ್ಲಿಂ ಜಗತ್ತಿಗೆ, ಇಸ್ರೇಲ್‌ಗೆ ಮತ್ತು ಅಮೆರಿಕಕ್ಕೆ ಒಂದು ಶ್ರೇಷ್ಠ ದಿನ ಎಂದು ಹೇಳಿದ್ದಾರೆ. ಇದೇ ವೇಳೆ ಮಧ್ಯಸ್ಥಿಕೆ ವಹಿಸಿದ ಕತಾರ್, ಈಜಿಪ್ಟ್ ಮತ್ತು ಟರ್ಕಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಒಪ್ಪಂದವು ಗಾಜಾದ ಮೇಲಿನ ಯುದ್ಧದ ಅಂತ್ಯ, ಇಸ್ರೇಲಿ ಪಡೆಗಳ ಹಿಂತೆಗೆತ, ಗಾಜಾಗೆ ಅಂತಾರಾಷ್ಟ್ರೀಯ ನೆರವಿನ ಪ್ರವೇಶ ಮತ್ತು ಕೈದಿಗಳ ವಿನಿಮಯವನ್ನು ಖಚಿತಪಡಿಸುತ್ತದೆ ಎಂದು ಹಮಾಸ್ ಕೂಡ ಹೇಳಿಕೆಯಲ್ಲಿ ದೃಢಪಡಿಸಿದೆ.

File photo
Israel-Gaza Ceasefire: ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿದೆ, ಪರಿಸ್ಥಿತಿ ಹದಗೆಡುವುದಕ್ಕೂ ಮುನ್ನ ನೀವೂ ಒಪ್ಪಿಕೊಳ್ಳಿ; ಹಮಾಸ್'ಗೆ ಟ್ರಂಪ್ ಎಚ್ಚರಿಕೆ

ಏತನ್ಮಧ್ಯೆ 'ಇದು ಇಸ್ರೇಲ್‌ಗೆ ದೊರೆತ ರಾಜತಾಂತ್ರಿಕ ಮತ್ತು ನೈತಿಕ ಜಯ' ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಟ್ರಂಪ್ ಅವರ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸಿದ್ದು, ಇಸ್ರೇಲ್‌ನ ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಆಹ್ವಾನ ನೀಡಿದ್ದಾರೆ. ಒಪ್ಪಂದವನ್ನು ಅನುಮೋದಿಸಲು ಅವರು ಶೀಘ್ರದಲ್ಲೇ ಸರ್ಕಾರದ ಸಭೆ ಕರೆಯುವುದಾಗಿಯೂ ತಿಳಿಸಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ಎರಡೂ ನಮ್ಮ ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ತನ್ನ ಸೈನ್ಯವನ್ನು ಒಪ್ಪಿಕೊಂಡ ಮಾರ್ಗಗಳಿಗೆ ಹಿಂತೆಗೆದುಕೊಳ್ಳುತ್ತದೆ.

ಇದು ಬಲವಾದ, ಶಾಶ್ವತ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿದೆ. ಎಲ್ಲಾ ಪಕ್ಷಗಳನ್ನು ನ್ಯಾಯದಿಂದ ನಡೆಸಿಕೊಳ್ಳಲಾಗುತ್ತದೆ. ಅರಬ್ ಮತ್ತು ಮುಸ್ಲಿಂ ಜಗತ್ತು, ಇಸ್ರೇಲ್, ಎಲ್ಲಾ ನೆರೆಯ ರಾಷ್ಟ್ರಗಳು ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಇದು ಐತಿಹಾಸಿಕ ಮತ್ತು ಸಂತೋಷದಾಯಕ ದಿನವಾಗಿದೆ. ನಮ್ಮೊಂದಿಗೆ ಒಟ್ಟಾಗಿ ಈ ಐತಿಹಾಸಿಕ ಮತ್ತು ವಿಶಿಷ್ಟ ಒಪ್ಪಂದವನ್ನು ಸಾಧ್ಯವಾಗಿಸಿದ ಕತಾರ್, ಈಜಿಪ್ಟ್ ಮತ್ತು ಟರ್ಕಿಯ ಮಧ್ಯವರ್ತಿಗಳಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ಶಾಂತಿ ತಯಾರಕರು ಧನ್ಯರು ಎಂದು ಹೇಳಿದ್ದಾರೆ.

2023ರ ಅಕ್ಟೋಬರ್‌ ನಿಂದ ಇಸ್ರೇಲ್ ನಡೆಸಿದ ಗಾಝಾ ಯುದ್ಧದಲ್ಲಿ ಕನಿಷ್ಠ 67,183 ಮಂದಿ ಮೃತಪಟ್ಟಿದ್ದು, 169,841 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನ್ ನ ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳಿವೆ.

ಇನ್ನೂ ಹೆಚ್ಚಿನ ಜನರು ನಾಶವಾದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ. 2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ 1,139 ಮಂದಿ ಸಾವನ್ನಪ್ಪಿದರು. ಸುಮಾರು 200 ಮಂದಿಯನ್ನು ಹಮಾಸ್ ಒತ್ತೆಯಾಳುಗಳಾಗಿರಿಸಿಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com