
ಇಸ್ಲಾಮಾಬಾದ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.
ಉಭಯ ರಾಷ್ಟ್ರಗಳ ನಡುವೆ ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಸಂಘರ್ಷದಲ್ಲಿ ಅಫ್ಘಾನಿಸ್ತಾನದ ಕ್ರೆಕಿಟಿಗರು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.
ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ಕ್ರೋಢೀಕರಿಸಲು ಕಾರ್ಯವಿಧಾನಗಳನ್ನು ಸ್ಥಾಪಿಸಲು ಹಾಗೂ ಕದನ ವಿರಾಮದ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಮಾತುಕತೆಗಳನ್ನು ನಡೆಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದು ಕತಾರ್ ತಿಳಿಸಿದೆ.
ಉಭಯ ರಾಷ್ಟ್ರಗಳ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಕತಾರ್ ಹಾಗೂ ಟರ್ಕಿ ಮಧ್ಯಸ್ಥಿಕೆ ವಹಿಸಿದ್ದು, ಇದರಂತೆ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಿಯೋಗಗಳು ದೋಹಾಕ್ಕೆ ಭೇಟಿ ನೀಡಿದ್ದವು. ಉಭಯ ರಾಷ್ಟ್ರಗಳ ರಕ್ಷಣಾ ಸಚಿವರು ದೋಹಾಗೆ ಭೇಟಿ ನೀಡಿದ್ದವು. ಮಾತುಕತೆ ಬಳಿಕ ಇದೀಗ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಕತಾರ್ ಹೇಳಿದೆ.
ಇದು ಅಫ್ಘಾನಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಲು ಮತ್ತು ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ತಕ್ಷಣದ ಕ್ರಮಗಳನ್ನು ಕೇಂದ್ರೀಕರಿಸುತ್ತದೆ ಎಂದು ಪಾಕಿಸ್ತಾನ ಹೇಳಿದೆ.
ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಲು ಅಧಿಕಾರವಿಲ್ಲದ ಕಾರಣ ಅನಾಮಧೇಯತೆಯ ಸ್ಥಿತಿಯಲ್ಲಿ ಮಾತನಾಡಿದ ಆಫ್ಘಾನಿಸ್ತಾನದ ಅಧಿಕಾರಿಗಳು, ನಮ್ಮ ಗುರಿ ಉಗ್ರ ಹಫೀಜ್ ಗುಲ್ ಬಹದ್ದೂರ್ ಗುಂಪಿನ ಅಡಗುತಾಣಗಳಾಗಿದ್ದವು. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮಿರ್ ಅಲಿಯಲ್ಲಿ ಭದ್ರತಾ ಪಡೆಗಳ ಆವರಣದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಗೆ ನೇರ ಪ್ರತಿಕ್ರಿಯೆಯಾಗಿ ನಾವು ಕಾರ್ಯಾಚರಣೆ ನಡೆಸಿದ್ದೆವು ಹೇಳಿದ್ದಾರೆ.
ಪಾಕಿಸ್ತಾನದ ವಾಯುಪಡೆ ನಡೆಸಿದ ದಾಳಿಯಲ್ಲಿ ಹಲವು ಯೋಧರು ಸಾವನ್ನಪ್ಪಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ಸ್ಥಳೀಯ ಕ್ರಿಕೆಟಿಗರು ಸೇರಿ ಕನಿಷ್ಟ 10 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.
Advertisement