
ಟಿಯಾನ್‌ಜಿನ್: ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.
ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡಿದರು.
ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಹೇಳಿದರು.
ಕಳೆದ 4 ದಶಕಗಳಿಂದ ಭಯೋತ್ಪಾದನೆಯ ಭಾರವನ್ನು ಭಾರತ ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ನಲ್ಲಿ ಭಯೋತ್ಪಾದನೆಯ ಕರಾಳ ಮುಖವನ್ನು ನಾವೆಲ್ಲರೂ ನೋಡಿದ್ದೇವೆ. ಈ ದುಃಖದ ಸಮಯದಲ್ಲಿ ನಮ್ಮೊಂದಿಗೆ ನಿಂತ ಸ್ನೇಹಪರ ದೇಶಕ್ಕೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಗಡಿಯಾಚೆಗಿನ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಉಗ್ರವಾದಕ್ಕೆ ಶೂನ್ಯ ಸಹಿಷ್ಣುತೆಗಾಗಿ ಮೋದಿಯವರು ಕರೆ ನೀಡಿದರು.
ಎಸ್ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ನನಗೆ ಸಂತೋಷವಾಗಿದೆ. ನಮಗೆ ಭವ್ಯ ಸ್ವಾಗತ ನೀಡಿದ್ದಕ್ಕಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಂದು ಉಜ್ಬೇಕಿಸ್ತಾನ್‌ನ ಸ್ವಾತಂತ್ರ್ಯ ದಿನ. ಈ ಕಾರಣಕ್ಕಾಗಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ.
ಎಸ್ಸಿಒ ಸದಸ್ಯ ರಾಷ್ಟ್ರವಾಗಿ ಭಾರತವು ಬಹಳ ಪಾಸಿಟಿವ್ ಪಾತ್ರವನ್ನು ವಹಿಸಿದೆ. ಎಸ್ಸಿಒಗಾಗಿ ಭಾರತದ ದೃಷ್ಟಿಕೋನ ಮತ್ತು ನೀತಿಯು ಮೂರು ಪ್ರಮುಖ ಸ್ತಂಭಗಳನ್ನು ಆಧರಿಸಿದೆ. ಅವುಗಳೆಂದರೆ, S – ಭದ್ರತೆ (Security), C- ಸಂಪರ್ಕ (Connectivity) ಮತ್ತು O – ಅವಕಾಶ (Opportunity) ಎಂದರು.
ಕಳೆದ 4 ದಶಕಗಳಿಂದ ಭಾರತ ಭಯೋತ್ಪಾದನೆಯ ಭಾರವನ್ನು ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ನಲ್ಲಿ ಭಯೋತ್ಪಾದನೆಯ ಕೆಟ್ಟ ಮುಖವನ್ನು ನಾವು ನೋಡಿದ್ದೇವೆ. ಈ ದಾಳಿಯು ಮಾನವೀಯತೆಯಲ್ಲಿ ನಂಬಿಕೆ ಇಡುವ ಪ್ರತಿಯೊಂದು ದೇಶ ಮತ್ತು ವ್ಯಕ್ತಿಗೆ ಬಹಿರಂಗ ಸವಾಲಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ, ಕೆಲವು ದೇಶಗಳು ಭಯೋತ್ಪಾದನೆಗೆ ಬಹಿರಂಗವಾಗಿ ಬೆಂಬಲ ನೀಡುವುದನ್ನು ನಾವು ಒಪ್ಪಿಕೊಳ್ಳಬಹುದೇ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಪ್ರತಿಯೊಂದು ರೂಪ ಮತ್ತು ಬಣ್ಣದಲ್ಲೂ ಭಯೋತ್ಪಾದನೆಯನ್ನು ನಾವು ಸರ್ವಾನುಮತದಿಂದ ವಿರೋಧಿಸಬೇಕು. ಇದು ಮಾನವೀಯತೆಯ ಕಡೆಗೆ ನಮ್ಮ ಕರ್ತವ್ಯ ಎಂದು ಹೇಳಿದರು.
ಯಾವುದೇ ದೇಶದ ಅಭಿವೃದ್ಧಿಯ ಆಧಾರ ಅದರ ಭದ್ರತೆ, ಶಾಂತಿ ಮತ್ತು ಸ್ಥಿರತೆ ಮೇಲೆ ನಿಂತಿರುತ್ತದೆ. ಆದರೆ, ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಉಗ್ರವಾದ ಈ ಹಾದಿಯಲ್ಲಿ ದೊಡ್ಡ ಸವಾಲುಗಳಾಗಿವೆ. ಭಯೋತ್ಪಾದನೆಯು ಕೇವಲ ಒಂದು ದೇಶದ ಭದ್ರತೆಗೆ ಸವಾಲಲ್ಲ, ಬದಲಾಗಿ ಎಲ್ಲಾ ಮಾನವೀಯತೆಗೆ ಸಾಮಾನ್ಯ ಸವಾಲಾಗಿದೆ.
ಯಾವುದೇ ದೇಶ, ಯಾವುದೇ ಸಮಾಜ, ಯಾವುದೇ ನಾಗರಿಕರು ಅದರಿಂದ ಸುರಕ್ಷಿತರೆಂದು ಪರಿಗಣಿಸಲು ಸಾಧ್ಯವಿಲ್ಲ. ಆದ್ದರಿಂದ, ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಏಕತೆಯನ್ನು ಒತ್ತಿ ಹೇಳಿದೆ. ಜಂಟಿ ಮಾಹಿತಿ ಕಾರ್ಯಾಚರಣೆಯನ್ನು ಮುನ್ನಡೆಸುವ ಮೂಲಕ ಅಲ್ ಖೈದಾ ಮತ್ತು ಅದರೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಹೋರಾಡಲು ಭಾರತ ಉಪಕ್ರಮವನ್ನು ತೆಗೆದುಕೊಂಡಿತು. ಭಯೋತ್ಪಾದನೆಗೆ ಹಣಕಾಸು ಒದಗಿಸುವುದರ ವಿರುದ್ಧ ನಾವು ನಮ್ಮ ಧ್ವನಿ ಎತ್ತಿದ್ದೇವೆ. ಅದರಲ್ಲಿ ನಿಮ್ಮ ಬೆಂಬಲಕ್ಕಾಗಿ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.
Advertisement