ಮೋದಿ ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಡೊನಾಲ್ಡ್ ಟ್ರಂಪ್; Video

ನಾವು ಭಾರತವನ್ನು ಕಳೆದುಕೊಂಡಿಲ್ಲ. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದ ತೈಲವನ್ನು ಖರೀದಿಸುತ್ತಿದೆ. ಅದು ನಮಗೆ ಬಹಳ ನಿರಾಶೆ ತಂದಿದೆ. ಹೀಗಾಗಿ ಅದನ್ನು ಅವರಿಗೆ ತಿಳಿಸಲು ದೊಡ್ಡ ರೀತಿಯ ಸುಂಕವನ್ನು ವಿಧಿಸಿದ್ದೇವೆ.
Donald trump
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Updated on

ವಾಷಿಂಗ್ಟನ್: ಭಾರತ, ಚೀನಾ ಹಾಗೂ ರಷ್ಯಾ ದೇಶಗಳ ಮುಖ್ಯಸ್ಥರು ಇತ್ತೀಚೆಗೆ ಚೀನಾದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಂತೆಯೇ ವಿಚಲಿತರಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ತಮ್ಮ ವರಸೆಯನ್ನೇ ಬದಲಿಸುತ್ತಿದ್ದಾರೆ.

ನಾನು ಯಾವಾಗಲೂ ಮೋದಿ ಜೊತೆ ಸ್ನೇಹಿತನಾಗಿರುತ್ತೇನೆ. ಭಾರತ ಮತ್ತು ಅಮೆರಿಕಾ ವಿಶೇಷ ಸಂಬಂಧವನ್ನು ಹೊಂದಿದ್ದು, ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಹೇಳಿದ್ದಾರೆ.

ತಮ್ಮ ಓವಲ್ ಕಚೇರಿಯಲ್ಲಿ ಮಾತನಾಡಿರುವ ಟ್ರಂಪ್ ಅವರು, ಭಾರತ ಜೊತೆಗೆ ಸಂಬಂಧ ಸುಧಾರಣೆಗೆ ಸಿದ್ಧರಿದ್ದೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ್ದಾರೆ.

ನಾನು ಯಾವಾಗಲೂ (ನರೇಂದ್ರ) ಮೋದಿ ಅವರೊಂದಿಗೆ ಸ್ನೇಹಿತನಾಗಿರುತ್ತೇನೆ. ಅವರು ಒಬ್ಬ ಉತ್ತಮ ಹಾಗೂ ಅಧ್ಬುತ ಪ್ರಧಾನಿ. ಆದರೆ ಈ ನಿರ್ದಿಷ್ಟ ಕ್ಷಣದಲ್ಲಿ ಅವರು ಮಾಡುತ್ತಿರುವುದು ನನಗೆ ಇಷ್ಟವಿಲ್ಲ. ಆದರೆ ಭಾರತ ಮತ್ತು ಅಮೆರಿಕ ವಿಶೇಷ ಸಂಬಂಧವನ್ನು ಹೊಂದಿವೆ. ಈ ಬಗ್ಗೆ ಚಿಂತಿಸಲು ಏನೂ ಇಲ್ಲ. ಪ್ರಸ್ತುತ ಪರಿಸ್ಥಿತಿ ಕ್ಷಣಿಕವಷ್ಟೇ ಎಂದು ಹೇಳಿದ್ದಾರೆ.

ನಾವು ಭಾರತವನ್ನು ಕಳೆದುಕೊಂಡಿಲ್ಲ. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದ ತೈಲವನ್ನು ಖರೀದಿಸುತ್ತಿದೆ. ಅದು ನಮಗೆ ಬಹಳ ನಿರಾಶೆ ತಂದಿದೆ. ಹೀಗಾಗಿ ಅದನ್ನು ಅವರಿಗೆ ತಿಳಿಸಲು ದೊಡ್ಡ ರೀತಿಯ ಸುಂಕವನ್ನು ವಿಧಿಸಿದ್ದೇವೆ. ನಿಮಗೆ ತಿಳಿದಿರುವಂತೆ ನಾನು ಭಾರತದ ಪ್ರಧಾನಮಂತ್ರಿ (ನರೇಂದ್ರ ಮೋದಿ) ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. 2 ತಿಂಗಳ ಹಿಂದೆ ಮೋದಿ ಅಮೆರಿಕಾದಲ್ಲಿದ್ದರು. ರೋಸ್ ಗಾರ್ಡನ್ ನಲ್ಲಿ ನಾವಿಬ್ಬರೂ ಪತ್ರಿಕಾಗೋಷ್ಠಿ ನಡೆಸಿದ್ದೆವು ಎಂದು ತಿಳಿಸಿದ್ದಾರೆ.

ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಟ್ರಂಪ್ ಅವರು, ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ. ಅವರಿಗೆ ಸುದೀರ್ಘ ಹಾಗೂ ಸಮೃದ್ಧ ಭವಿಷ್ಯ ಸಿಗುವಂತಾಗಲಿ ಎಂದು ಹೇಳಿದ್ದರು.

ಇದರ ಜತೆಗೆ ಅವರು ಇತ್ತೀಚೆಗೆ ನಡೆದ ಶಾಂಘೈ ಸಹಕಾರ ಒಕ್ಕೂಟದ (ಎಸ್‌ಸಿಒ) ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದರ ಫೋಟೋವನ್ನು ಪೋಸ್ಟ್ ಮಾಡಿದ್ದರು. ಈ ಮೂಲಕ ಮೂರೂ ದೇಶಗಳ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದು ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ.

Donald trump
ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ: ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

ರಷ್ಯಾದಿಂದ ತೈಲ ಖರೀದಿ ಮತ್ತು ಶೇ.50ರಷ್ಟು ತೆರಿಗೆ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಭಾರತದ ನಡುವಿನ 20 ವರ್ಷಗಳ ಆತ್ಮೀಯ ಸಂಬಂಧ ಬಹುತೇಕ ಹದಗೆಟ್ಟಿದೆ. ಆ ಬಳಿಕ ಭಾರತವು ಚೀನಾ ಜತೆಗಿನ ವಿವಾದ ಪರಿಹಾರಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಅಲ್ಲದೆ, ಅಮೆರಿಕ ಬೆದರಿಕೆ ಹೊರತಾಗಿಯೂ ರಷ್ಯಾ ಜತೆಗಿನ ಸಂಬಂಧ ಕಡಿದುಕೊಳ್ಳದೇ ಇರಲು ನಿರ್ಧರಿಸಿದೆ.

ಇದರ ಬೆನ್ನಲ್ಲೇ ಎಸ್‌ಒ ಶೃಂಗದಲ್ಲಿ ಪುಟಿನ್ ಕ್ಸಿಮತ್ತು ಮೋದಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದರು. ವಿರೋಧಿಗಳ ಒಗ್ಗಟ್ಟು ಟ್ರಂಪ್ ರನ್ನು ವಿಚಲಿತ ಮಾಡಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com