'ಭಾರತ ಶತ್ರು ರಾಷ್ಟ್ರ.. Donald Trump ನೊಬೆಲ್ ಪ್ರಶಸ್ತಿಗೆ ಅರ್ಹ'; ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಗಮಗೊಳಿಸಿದ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಕೊಂಡಿತು.
Pakistan PM Shehbaz Sharif
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
Updated on

ವಾಷಿಂಗ್ಟನ್: ಭಾರತ ವಿರುದ್ಧದ ಯುದ್ಧದ ಸಂದರ್ಭದಲ್ಲಿ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕಾರಣರಾಗಿದ್ದು, ಅವರಿಗೆ 'ನೊಬೆಲ್' ಶಾಂತಿ ಪಾರಿತೋಷಕ ನೀಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, 'ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಗಮಗೊಳಿಸಿದ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಕೊಂಡಿತು. ಅವರ ಮಧ್ಯ ಪ್ರವೇಶದಿಂದಾಗಿಯೇ ಯುದ್ದ ಉಲ್ಬಣವಾಗಲಿಲ್ಲ. ಅವರು ಮಧ್ಯಪ್ರವೇಶಿಸದಿದ್ದರೆ, ಅದು ಘೋರ ಯುದ್ಧವಾಗಿರುತ್ತಿತ್ತು. ಟ್ರಂಪ್ ಶಾಂತಿಪ್ರಿಯ ವ್ಯಕ್ತಿ. ನಾವು ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಬೇಕು. ಇದು ನಾವು ಅವರಿಗೆ ನೀಡುವ ಕನಿಷ್ಠ ಗೌರವ ಎಂದು ಹೇಳಿದ್ದಾರೆ.

ಇದೇ ವೇಳೆ ಭಾರತದ ವಿರುದ್ಧ ಕಿಡಿಕಾರಿದ ಶೆಹಬಾಜ್ ಷರೀಫ್, 'ಸಿಂಧೂ ನದಿ ನೀರು ಒಪ್ಪಂದದ ಯಾವುದೇ ಉಲ್ಲಂಘನೆಯು "ಯುದ್ಧದ ಕೃತ್ಯ"ವಾಗುತ್ತದೆ. ಪಾಕಿಸ್ತಾನದ ವಿದೇಶಾಂಗ ನೀತಿಯು "ಶಾಂತಿ, ಪರಸ್ಪರ ಗೌರವ ಮತ್ತು ಸಹಕಾರ"ವನ್ನು ಆಧರಿಸಿದೆ ಮತ್ತು ವಿವಾದಗಳನ್ನು ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂದು ಹೇಳಿದರು.

"ಈ ವರ್ಷ ಮೇ ತಿಂಗಳಲ್ಲಿ ನಮ್ಮ ದೇಶವು ಪೂರ್ವ ಭಾಗದಿಂದ ಅಪ್ರಚೋದಿತ ಆಕ್ರಮಣವನ್ನು ಎದುರಿಸಿತು. ನಮ್ಮ ಪ್ರತಿಕ್ರಿಯೆ ಆತ್ಮರಕ್ಷಣೆಗೆ ಅನುಗುಣವಾಗಿತ್ತು. ಆದಾಗ್ಯೂ ನಾವು ಅವರನ್ನುಶೌರ್ಯದಿಂದ ಹಿಮ್ಮೆಟಿಸಿದೆವು. ಭಾರತ ನಮ್ಮ ನಗರಗಳ ಮೇಲೆ ದಾಳಿ ಮಾಡಿ ನಮ್ಮ ನಾಗರಿಕರನ್ನು ಗುರಿಯಾಗಿಸಿಕೊಂಡಿತು ಎಂದು ಹೇಳಿದರು.

Pakistan PM Shehbaz Sharif
Donald Trump: ಆಮದು ಔಷಧಿಗಳ ಮೇಲೆ 100% ಸುಂಕ ಘೋಷಣೆ; ಅಕ್ಟೋಬರ್ 1 ರಿಂದ ಜಾರಿ; ಇಲ್ಲಿದೆ ಮಾಹಿತಿ...

'7 ಯುದ್ಧ ವಿಮಾನಗಳ ಹೊಡೆದುರುಳಿಸಿದೆವು'

ಇದೇ ವೇಳೆ ಭಾರತದ ಜೊತೆಗಿನ ಯುದ್ಧದ ವೇಳೆ ಪಾಕಿಸ್ತಾನ ಸೇನೆಯ ಶೌರ್ಯ ಶ್ಲಾಘಿಸಿದ ಶೆಹಬಾಜ್ ಷರೀಫ್, ನಮ್ಮ ನಗರಗಳ ಮೇಲೆ ದಾಳಿ ಮಾಡಲು ಬಂದ ಭಾರತದ 7 ಯುದ್ಧವಿಮಾನಗಳನ್ನು ಹೊಡೆದುರುಳಿಸಿದೆವು. ನಮ್ಮ ಸೇನೆ ಮತ್ತು ಅಂದಿನ ಸೇನಾಧ್ಯಕ್ಷ ಆಸಿಫ್ ಮುನೀರ್ ಅವರ ಈ ಸಾಹಸ ಶ್ಲಾಘನೀಯ ಎಂದು ಹೇಳಿದರು.

ಟ್ರಂಪ್ ಗೆ ನೊಬೆಲ್ ಪ್ರಶಸ್ತಿ ಕೊಡಬೇಕು

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಲು ಡೊನಾಲ್ಡ್ ಟ್ರಂಪ್ ಸಹಾಯ ಮಾಡಿದ್ದಾರೆ. ಕದನ ವಿರಾಮವನ್ನು ಅಧ್ಯಕ್ಷ ಟ್ರಂಪ್ ಸುಗಮಗೊಳಿಸಿದರು. ಒಂದು ವೇಳೆ ಅದಾಗದೇ ಇದಿದ್ದರೆ ಏನಾಯಿತು ಎಂದು ಹೇಳಲು ಯಾರು ಬದುಕಿರುತ್ತಿದ್ದರು. ಹೀಗಾಗಿ ನಾವು ಅಧ್ಯಕ್ಷ ಟ್ರಂಪ್ ಅವರನ್ನು ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದೇವೆ ಎಂದು ಶೆಹಬಾಜ್ ಷರೀಪ್ ಹೇಳಿದರು.

ಅಂತೆಯೇ "ಪಾಕಿಸ್ತಾನವು ಬಾಕಿ ಇರುವ ವಿಷಯಗಳ ಕುರಿತು ಭಾರತದೊಂದಿಗೆ ಸಮಗ್ರ ಸಂವಾದಕ್ಕೆ ಸಿದ್ಧವಾಗಿದೆ" ಎಂದು ಅವರು ಇದೇ ವೇಳೆ ಘೋಷಿಸಿದರು.

ಪರಮಾಣು ಯುದ್ಧ

ತಮ್ಮ ಭಾಷಣದಲ್ಲಿ ಪಾಕ್ ಪ್ರಧಾನಿ ಶಹಬಾಜ್ ಷರೀಪ್ ಪರಮಾಣು ಯುದ್ಧದ ಕುರಿತೂ ಮಾತನಾಡಿದ್ದು, ಪರಮಾಣು ದೇಶಗಳಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಮೇ ತಿಂಗಳ ಯುದ್ಧ ಉಲ್ಬಣವಾಗಿದ್ದರೆ ಯಾರೂ ಬದುಕಿರುತ್ತಿರಲಿಲ್ಲ ಎಂದು ಹೇಳುವ ಮೂಲಕ ಎರಡೂ ದೇಶಗಳ ನಡುವೆ ಪರಮಾಣು ಯುದ್ಧದ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com