Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ (US-Israel) ಕ್ಷಿಪಣಿ ದಾಳಿನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಟ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
projectile hits near Iran's Bushehr nuclear plant
ಬುಶೆಹ್ರ್ ಅಣು ಸ್ಥಾವರ ಮೇಲೆ ದಾಳಿ
Updated on

ಟೆಹ್ರಾನ್: ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರೆದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ.

ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ (US-Israel) ಕ್ಷಿಪಣಿ ದಾಳಿನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಟ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ದಕ್ಷಿಣ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಇದಕ್ಕೂ ಮೊದಲು, ಇರಾನ್‌ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದ ಮಹ್‌ಶಹರ್ ಪೆಟ್ರೋಕೆಮಿಕಲ್ ವಲಯದ ಮೇಲೆ ನಡೆದಿದ್ದ ದಾಳಿಯಲ್ಲಿ ಐವರು ಗಾಯಗೊಂಡಿದ್ದರು.

projectile hits near Iran's Bushehr nuclear plant
ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತದ ರಕ್ಷಣಾ ರಫ್ತು ಇತಿಹಾಸದಲ್ಲೇ ದಾಖಲೆಯ ಏರಿಕೆ!, ಖರೀದಿದಾರರು ಯಾರು?

ವಿಕಿರಣ ಸೋರಿಕೆ ಇಲ್ಲ ಎಂದ IAEA

ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಆವರಣದ ಬಳಿ ಒಂದು ಕ್ಷಿಪಣಿ ಅಪ್ಪಳಿಸಿದ ಬಗ್ಗೆ ಇರಾನ್‌ನಿಂದ ಮಾಹಿತಿ ಪಡೆಯಲಾಗಿದೆ ಎಂದು ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ (IAEA) ಶನಿವಾರ (ಏಪ್ರಿಲ್ 4, 2026) ತಿಳಿಸಿದೆ.

ಸೈಟ್‌ನ ಭೌತಿಕ ರಕ್ಷಣಾ ಸಿಬ್ಬಂದಿಗಳಲ್ಲಿ ಒಬ್ಬರು ‘ಪ್ರೊಜೆಕ್ಟೈಲ್ ತುಣುಕಿನಿಂದ’ ಸಾವನ್ನಪ್ಪಿದ್ದಾರೆ ಮತ್ತು ಸೈಟ್‌ನಲ್ಲಿರುವ ಕಟ್ಟಡವು ಆಘಾತ ತರಂಗಗಳು ಮತ್ತು ತುಣುಕುಗಳಿಂದ ಪ್ರಭಾವಿತವಾಗಿದೆ ಎಂದು IAEA X ಪೋಸ್ಟ್‌ನಲ್ಲಿ ತಿಳಿಸಿದೆ.

ವಿಕಿರಣ ಸೋರಿಕೆಯಾಗಿಲ್ಲ

ಇದೇ ವೇಳೆ ಘಟನಾ ಸ್ಥಳದಲ್ಲಿ ಯಾವುದೇ ರೀತಿಯ ವಿಕಿರಣ ಸೋರಿಕೆಯಾಗಿಲ್ಲ. ವಿಕಿರಣ ಮಟ್ಟದಲ್ಲಿ ಯಾವುದೇ ಹೆಚ್ಚಳ ವರದಿಯಾಗಿಲ್ಲ ಎಂದೂ IAEA ಹೇಳಿದೆ. ಅಲ್ಲದೆ ಈ ಘಟನೆಯು ಸ್ಥಾವರದ ಮುಖ್ಯ ಭಾಗಗಳಿಗೆ ಹಾನಿಯಾಗಿಲ್ಲ ಮತ್ತು ಉತ್ಪಾದನೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಿದೆ.

ಅಂದಹಾಗೆ ಒಂದು ತಿಂಗಳ ಹಿಂದೆ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಆಪರೇಷನ್ ಫ್ಯೂರಿ ಹೆಸರಿನಲ್ಲಿ ಸೇನಾ ದಾಳಿ ನಡೆಸಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಪರಿಣಾಮ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತು. ಯುದ್ಧ ಪಶ್ಚಿಮ ಏಷ್ಯಾದಾದ್ಯಂತ ಹರಡಿದ್ದು, ಜಾಗತಿಕ ಆರ್ಥಿಕತೆ ಮತ್ತು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com