ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳ ಮೇಲೆ ಶೇ. 50 ರಷ್ಟು ಸುಂಕ ವಿಧಿಸುತ್ತೇವೆ: ಟ್ರಂಪ್ ಹೊಸ ಬೆದರಿಕೆ

ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮದ ಮೂಲಕ ಟ್ರಂಪ್ ಈ ಹೊಸ ಬೆದರಿಕೆ ಹಾಕಿದ್ದು, ಈ ಕ್ರಮವು ತಕ್ಷಣವೇ ಜಾರಿಗೆ ಬರುತ್ತದೆ ಮತ್ತು ಯಾವುದೇ ವಿನಾಯಿತಿ ಇರುವುದಿಲ್ಲ" ಎಲ್ಲಾ ಸರಕುಗಳಿಗೆ" ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.
Donald Trump
ಡೊನಾಲ್ಡ್ ಟ್ರಂಪ್
Updated on

ವಾಷಿಂಗ್ಟನ್: ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ಅಮೆರಿಕ-ಇಸ್ರೇಲ್-ಇರಾನ್ ಯುದ್ದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಹೊಸ ಬೆದರಿಕೆ ಹಾಕಿದ್ದಾರೆ.

ಇರಾನ್‌ಗೆ ಸೇನಾ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶಗಳಿಂದ ಅಮೆರಿಕಕ್ಕೆ ರಫ್ತು ಆಗುವ ಎಲ್ಲಾ ಸರಕುಗಳ ಮೇಲೆ ತಕ್ಷಣವೇ ಶೇಕಡಾ 50 ರಷ್ಟು ಸುಂಕ ವಿಧಿಸುತ್ತೇವೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮದ ಮೂಲಕ ಟ್ರಂಪ್ ಈ ಹೊಸ ಬೆದರಿಕೆ ಹಾಕಿದ್ದು, ಈ ಕ್ರಮವು ತಕ್ಷಣವೇ ಜಾರಿಗೆ ಬರುತ್ತದೆ ಮತ್ತು ಯಾವುದೇ ವಿನಾಯಿತಿ ಇರುವುದಿಲ್ಲ" ಎಲ್ಲಾ ಸರಕುಗಳಿಗೆ" ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

Donald Trump
ಇರಾನ್‌ನಲ್ಲಿ ಹೂತಿಟ್ಟಿರುವ ಯುರೇನಿಯಂ ಅನ್ನು ಅಮೆರಿಕ 'ಹೊರ ತೆಗೆಯಲಿದೆ': ಡೊನಾಲ್ಡ್ ಟ್ರಂಪ್

"ಇರಾನ್‌ಗೆ ಸೇನಾ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಕ್ಕೆ ಮಾರಾಟ ಮಾಡುವ ಯಾವುದೇ ಮತ್ತು ಎಲ್ಲಾ ಸರಕುಗಳ ಮೇಲೆ ತಕ್ಷಣವೇ ಶೇ. 50 ರಷ್ಟು ಸುಂಕವನ್ನು ವಿಧಿಸಲಾಗುತ್ತದೆ. ಇದು ತಕ್ಷಣವೇ ಜಾರಿಗೆ ಬರುತ್ತದೆ. ಯಾವುದೇ ವಿನಾಯಿತಿ ಇರುವುದಿಲ್ಲ" ಎಂದು ಟ್ರಂಪ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಅನುಕೂಲವಾಗುವಂತೆ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com