"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಮುಂಬರುವ ವರ್ಷಗಳಲ್ಲಿ ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದಲ್ಲ ಮತ್ತು ಅದನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುವುದಿಲ್ಲ ಎಂಬ ದೃಢವಾದ ಬದ್ಧತೆಯನ್ನು ಯುಎಸ್ ಬಯಸಿದೆ.
JD Vance
ಜೆಡಿ ವ್ಯಾನ್ಸ್
Updated on

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಇರಾನ್‌ ಜೊತೆಗೆ ನಡೆದ 21 ಗಂಟೆಗಳ ಮಾತುಕತೆಯ ಸಮಯದಲ್ಲಿ ಯಾವುದೇ ಪ್ರಗತಿ ಸಾಧಿಸಲಾಗಿಲ್ಲ ಎಂದು ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾನುವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವ್ಯಾನ್ಸ್, ಇರಾನಿಯನ್ನರು ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ. ಒಳ್ಳೆಯ ನಂಬಿಕೆಯಿಂದ ಬಂದು ಒಪ್ಪಂದ ಮಾಡಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದುರಾದೃಷ್ಟವಶಾತ್ ಅದು ಆಗುತ್ತಿಲ್ಲ ಎಂದರು.

ಮುಂಬರುವ ವರ್ಷಗಳಲ್ಲಿ ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದಲ್ಲ ಮತ್ತು ಅದನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುವುದಿಲ್ಲ ಎಂಬ ದೃಢವಾದ ಬದ್ಧತೆಯನ್ನು ಯುಎಸ್ ಬಯಸಿದೆ.

ಅವರ ಪರಮಾಣು ಕಾರ್ಯಕ್ರಮ ಮತ್ತು ಮೊದಲು ಹೊಂದಿದ್ದ ಪರಮಾಣು ಸಂಗ್ರಹವನ್ನು ನಾಶಪಡಿಸಿದ್ದೇವು. ಆದಾಗ್ಯೂ ಹೆಚ್ಚೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಮಾತುಕತೆ ಫಲಿತಾಂಶ ಏನೇ ಆಗಲಿ ತಲೆಕೆಡಿಸಿಕೊಳ್ಳುವುದಿಲ್ಲ. ಅಮೆರಿಕ ಗೆದ್ದಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ಗಂಟೆಗಳ ನಂತರ ವ್ಯಾನ್ಸ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

JD Vance
ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

ಇರಾನ್ ನಾಯಕರನ್ನು ಕೊಂದು ಪ್ರಮುಖ ಮಿಲಿಟರಿ ಮೂಲಸೌಕರ್ಯವನ್ನು ನಾಶಪಡಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್ ಈಗಾಗಲೇ ಯುದ್ಧಭೂಮಿಯಲ್ಲಿ ಜಯಗಳಿಸಿದೆ ಎಂದು ಪ್ರತಿಪಾದಿಸಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳಲಿ ಅಥವಾ ಇಲ್ಲದಿರಲಿ ನನಗೆ ಯಾವುದೇ ವ್ಯತ್ಯಾಸವಿಲ್ಲ. ಕಾರಣ ನಾವು ಗೆದ್ದಿದ್ದೇವೆ ಎಂದು ಟ್ರಂಪ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com