ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

ಅಮೆರಿಕದೊಂದಿಗೆ ನಡೆದ ಯುದ್ಧ ವಿರಾಮ ಮಾತುಕತೆಗಳು ವಿಫಲವಾದ ಬೆನ್ನಲ್ಲೇ ಇರಾನ್ ಸಂಸತ್‌ ಸಭಾಪತಿ ಮೊಹಮ್ಮದ್ ಬಾಗರ್ ಘಾಲಿಬಾಫ್ ಅವರು, ಈ ಚರ್ಚೆಗಳ ವೇಳೆ ವಾಷಿಂಗ್ಟನ್ ಟೆಹ್ರಾನ್‌ನ ವಿಶ್ವಾಸವನ್ನು ಗಳಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ.
iran delegation
ಇರಾನ್ ನಿಯೋಗ
Updated on

ಟೆಹ್ರಾನ್: ಅಮೆರಿಕದೊಂದಿಗೆ ನಡೆದ ಯುದ್ಧ ವಿರಾಮ ಮಾತುಕತೆಗಳು ವಿಫಲವಾದ ಬೆನ್ನಲ್ಲೇ ಇರಾನ್ ಸಂಸತ್‌ ಸಭಾಪತಿ ಮೊಹಮ್ಮದ್ ಬಾಗರ್ ಘಾಲಿಬಾಫ್ ಅವರು, ಈ ಚರ್ಚೆಗಳ ವೇಳೆ ವಾಷಿಂಗ್ಟನ್ ಟೆಹ್ರಾನ್‌ನ ವಿಶ್ವಾಸವನ್ನು ಗಳಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಅಮೆರಿಕದ ಪ್ರತಿನಿಧಿಗಳೊಂದಿಗೆ ನಡೆದ ಶಾಂತಿ ಮಾತುಕತೆಯಲ್ಲಿ ಭಾಗವಹಿಸಿದ್ದ ಘಾಲಿಬಾಫ್, ಇರಾನಿ ಪ್ರತಿನಿಧಿ ಮಂಡಳಿಯ ನನ್ನ ಸಹೋದ್ಯೋಗಿಗಳು ರಚನಾತ್ಮಕ ಸಲಹೆಗಳನ್ನು ಮುಂದಿಟ್ಟರೂ, ಅಂತಿಮವಾಗಿ ಈ ಸುತ್ತಿನ ಮಾತುಕತೆಯಲ್ಲಿ ಎದುರಾಳಿ ಪಕ್ಷ ಇರಾನಿ ಪ್ರತಿನಿಧಿ ಮಂಡಳಿಯ ವಿಶ್ವಾಸವನ್ನು ಸಂಪಾದಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಎರಡೂ ದೇಶಗಳ ನಿಯೋಗಗಳ ನಡುವೆ 21 ಗಂಟೆಗಳ ನಿರ್ಣಾಯಕ ಮಾತುಕತೆಯ ನಂತರ ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್ ಒಪ್ಪಂದ ಮಾಡಿಕೊಳ್ಳಲು ವಿಫಲವಾದವು. ಆದಾಗ್ಯೂ, ತಕ್ಷಣದ ಯುದ್ಧಕ್ಕೆ ಮರಳುವ ಸಾಧ್ಯತೆಗಳಿಲ್ಲ. ಮಾತುಕತೆಯ ನಂತರ ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪಾಕಿಸ್ತಾನವನ್ನು ತೊರೆದಿದ್ದಾರೆ.

iran delegation
US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com