ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

ಉಭಯ ರಾಷ್ಟ್ರಗಳು ಕೆಲವು ತಾಸು ವಿರಾಮ ಪಡೆದಿವೆ. ಯುನೈಟೆಡ್ ಸ್ಟೇಟ್ಸ್ ಹಾರ್ಮುಜ್ ಜಲಸಂಧಿಯಲ್ಲಿ "ಅತಿಯಾದ ಬೇಡಿಕೆಗಳನ್ನು ಮಾಡುತ್ತಿದೆ ಎಂದು ಇರಾನಿನ ಮಾಧ್ಯಮಗಳು ಆರೋಪಿಸಿವೆ.
Pakistan pm Shehbaz Sharif (R) speaks with US Vice President JD Vance
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರೊಂದಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಪ್ ಮಾತುಕತೆಯ ಚಿತ್ರ
Updated on

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಶಾಂತಿ ಮಾತುಕತೆ ಅಂತಿಮ ಆಗಿಲ್ಲ. 2ನೇ ದಿನವಾದ ಇಂದು ಕೂಡಾ ಮುಂದುವರೆದಿದೆ. ಹಾರ್ಮುಜ್ ಜಲಸಂಧಿ ನಿರ್ಬಂಧ ವಿಚಾರದಲ್ಲಿ ಉಭಯ ರಾಷ್ಟ್ರಗಳ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಮಧ್ಯರಾತ್ರಿವರೆಗೂ ಮಾತುಕತೆ ನಡೆದಿದೆ ಎಂದು ಶ್ವೇತಭವನ ತಿಳಿಸಿದೆ.

ಉಭಯ ರಾಷ್ಟ್ರಗಳು ಕೆಲವು ತಾಸು ವಿರಾಮ ಪಡೆದಿವೆ. ಯುನೈಟೆಡ್ ಸ್ಟೇಟ್ಸ್ ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಅತಿಯಾದ ಬೇಡಿಕೆ ಇಡುತ್ತಿದೆ ಎಂದು ಇರಾನಿನ ಮಾಧ್ಯಮಗಳು ಆರೋಪಿಸಿವೆ.

ತೀವ್ರವಾದ ಮಾತುಕತೆಗಳು ನಡೆಯುತ್ತಿವೆ. ಆದರೆ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

Pakistan pm Shehbaz Sharif (R) speaks with US Vice President JD Vance
30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಇರಾನ್ ನಾಯಕರನ್ನು ಕೊಂದು ಪ್ರಮುಖ ಮಿಲಿಟರಿ ಮೂಲಸೌಕರ್ಯವನ್ನು ನಾಶಪಡಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್ ಈಗಾಗಲೇ ಯುದ್ಧಭೂಮಿಯಲ್ಲಿ ಜಯಗಳಿಸಿದೆ ಎಂದು ಪ್ರತಿಪಾದಿಸಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳಲಿ ಅಥವಾ ಇಲ್ಲದಿರಲಿ ನನಗೆ ಯಾವುದೇ ವ್ಯತ್ಯಾಸವಿಲ್ಲ. ಕಾರಣ ನಾವು ಗೆದ್ದಿದ್ದೇವೆ ಎಂದು ಟ್ರಂಪ್ ಹೇಳಿದರು.

ಈ ಮಧ್ಯೆ ಮಾತುಕತೆಗಳು ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿವೆ. ಚರ್ಚೆಗಳು ಸಕಾರಾತ್ಮಕವಾಗಿ ಸಾಗುತ್ತಿವೆ ಮತ್ತು ಒಟ್ಟಾರೆ ವಾತಾವರಣವು ಸೌಹಾರ್ದಯುತವಾಗಿದೆ ಎಂದು ನಾನು ಹೇಳಬಲ್ಲೆ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಸುದ್ದಿಸಂಸ್ಥೆ AFP ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com