West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಈಗಾಗಲೇ ಹಲವಾರು ತೈಲ ಸಾಗಣೆ ಹಡಗುಗಳು ಈ ಮಾರ್ಗವನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದು, ಕೆಲವು ಹಡಗುಗಳು ಮಧ್ಯದಲ್ಲೇ ದಿಕ್ಕು ಬದಲಿಸಿ ಹಿಂದಿರುಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
strait of Hormuz
ಹಾರ್ಮುಜ್ ಜಲಸಂಧಿ (ಸಂಗ್ರಹ ಚಿತ್ರ)online desk
Updated on

ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಮತ್ತೊಮ್ಮೆ ಕಠಿಣ ನಿಲುವು ತಾಳಿದ್ದು, ಜಾಗತಿಕವಾಗಿ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾಗಿರುವ ಹಾರ್ಮುಜ್ ಮೇಲೆ ನೌಕಾ ದಿಗ್ಭಂಧನ ಹೇರಿದ್ದಾರೆ.

ಪ್ರಮುಖ ಸಮುದ್ರ ಮಾರ್ಗವಾಗಿರುವ ಹಾರ್ಮುಜ್ ಜಗತ್ತಿನ ಒಟ್ಟು ಕಚ್ಚಾ ತೈಲ ಸಾಗಣೆಯ ಸುಮಾರು 20 ಶೇಕಡಾ ಪಾಲನ್ನು ಹೊತ್ತಿರುತ್ತದೆ. ಇಂತಹ ಪ್ರಮುಖ ಮಾರ್ಗದಲ್ಲಿ ಅಮೆರಿಕಾ ನೌಕಾಪಡೆ ತಡೆಗಟ್ಟುವಿಕೆ ಆರಂಭಿಸುವ ನಿರ್ಧಾರ ಕೈಗೊಂಡಿರುವುದು, ಜಾಗತಿಕ ಇಂಧನ ಸರಬರಾಜು ಸರಪಳಿಗೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ.

ಈಗಾಗಲೇ ಹಲವಾರು ತೈಲ ಸಾಗಣೆ ಹಡಗುಗಳು ಈ ಮಾರ್ಗವನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದು, ಕೆಲವು ಹಡಗುಗಳು ಮಧ್ಯದಲ್ಲೇ ದಿಕ್ಕು ಬದಲಿಸಿ ಹಿಂದಿರುಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ಬೆಳವಣಿಗೆಗೆ ಮೂಲ ಕಾರಣವಾಗಿದ್ದು, ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆದ ಅಮೆರಿಕಾ–ಇರಾನ್ ಮಾತುಕತೆಗಳ ವಿಫಲತೆ. ಸುಮಾರು 21 ಗಂಟೆಗಳ ಕಾಲ ನಡೆದ ಚರ್ಚೆಗಳಲ್ಲಿ ಹಲವಾರು ವಿಷಯಗಳಲ್ಲಿ ಮಾತುಕತೆಗಳು ನಡೆದಿದ್ದರೂ ಇರಾನ್ ತನ್ನ ಪರಮಾಣು ಶಸ್ತ್ರಾಸ್ತ್ರ ಹೊಂದು ಆಗ್ರಹವನ್ನು ತ್ಯಜಿಸಲು ನಿರಾಕರಿಸಿದ ಕಾರಣ ಅಂತಿಮ ಒಪ್ಪಂದಕ್ಕೆ ಬರಲಾಗಲಿಲ್ಲ. ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಇದನ್ನು “ಅಂತಿಮ ಮತ್ತು ಅತ್ಯುತ್ತಮ ಪ್ರಸ್ತಾವನೆ” ಎಂದು ಹೇಳಿದರೂ, ಇರಾನ್ ಇದನ್ನು ಒಪ್ಪಲಿಲ್ಲ.

ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ನೌಕಾ ದಿಗ್ಬಂಧನ (ನೇವಲ್ ಬ್ಲಾಕೇಡ್) ಜಾರಿಗೆ ಆದೇಶಿಸಿದ್ದಾರೆ.

strait of Hormuz
ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆದ ಅಮೆರಿಕಾ–ಇರಾನ್ ಮಾತುಕತೆಗಳು “ಚೆನ್ನಾಗಿ ನಡೆದವು” ಎಂದು ಟ್ರಂಪ್ ಒಪ್ಪಿಕೊಂಡಿದ್ದರೂ, ಅಂತಿಮ ಒಪ್ಪಂದಕ್ಕೆ ಬರಲಾಗದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸುಮಾರು 21 ಗಂಟೆಗಳ ಕಾಲ ನಡೆದ ಈ ಮಹತ್ವದ ಮಾತುಕತೆಗಳಲ್ಲಿ ಹಲವು ವಿಷಯಗಳಲ್ಲಿ ಒಪ್ಪಂದದ ಹಾದಿ ಕಂಡುಬಂದಿದ್ದರೂ, ಇರಾನ್ ತನ್ನ ಪರಮಾಣು ಶಸ್ತ್ರಾಸ್ತ್ರ ಹೊಂದುವ ಆಗ್ರಹವನ್ನು ತ್ಯಜಿಸಲು ನಿರಾಕರಿಸಿದ ಕಾರಣ ಮಾತುಕತೆ ವಿಫಲವಾಗಿದೆ ಎಂದು ಹೇಳಿದ್ದಾರೆ.

ನಾವು ಸತತ 21 ಗಂಟೆಗಳ ಕಾಲ ಮಾತುಕತೆಯಲ್ಲಿ ತೊಡಗಿದ್ದೆವು. ಆದರೆ ದುರದೃಷ್ಟವಶಾತ್ ನಾವು ಯಾವುದೇ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ ಎಂಬುದು ಕೆಟ್ಟ ಸುದ್ದಿ. ನಾವು ಇರಾನ್‌ಗೆ ಅತ್ಯುತ್ತಮ ಆಫರ್‌ಗಳನ್ನು ನೀಡಿದ್ದೆವು, ಆದರೂ ಅವರು ಒಪ್ಪಂದಕ್ಕೆ ಸಿದ್ಧರಿಲ್ಲ. ಹೀಗಾಗಿ ನಮ್ಮ ನಿಯೋಗ ಈಗ ಪಾಕಿಸ್ತಾನದಿಂದ ಅಮೆರಿಕಕ್ಕೆ ಹಿಂದಿರುಗುತ್ತಿದೆ ಎಂದು ಅವರು ತಿಳಿಸಿದರು. ಮಾತುಕತೆಯ ಸಮಯದಲ್ಲಿ ವಾಷಿಂಗ್ಟನ್ ತನ್ನ ನಿರ್ಣಾಯಕ ಶರತ್ತುಗಳನ್ನು ಸ್ಪಷ್ಟವಾಗಿ ವಿವರಿಸಿದೆ ಎಂದು ವ್ಯಾನ್ಸ್ ಹೇಳಿದ್ದಾರೆ.

ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಬಾರದು ಮತ್ತು ಅಂತಹ ಶಸ್ತ್ರಾಸ್ತ್ರಗಳನ್ನು ಸಾಧಿಸಲು ಅನುವು ಮಾಡಿಕೊಡುವ ಸಾಧನಗಳನ್ನು ಹುಡುಕುವುದಿಲ್ಲ ಎಂಬ ದೃಢವಾದ ಬದ್ಧತೆಯನ್ನು ನೀಡಬೇಕು ಎಂಬುದು ಅಮೆರಿಕದ ಪ್ರಮುಖ ಬೇಡಿಕೆಯಾಗಿತ್ತು.

ಟ್ರಂಪ್ ಗುರಿ ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸಂಪೂರ್ಣವಾಗಿ ಹತ್ತಿಕ್ಕುವುದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಗುರಿಯಾಗಿದೆ. ಆದರೆ ಇರಾನ್ ಈ ಷರತ್ತುಗಳಿಗೆ ಪೂರ್ಣವಾಗಿ ಒಪ್ಪದ ಕಾರಣ ಮಾತುಕತೆ ಹಳಿ ತಪ್ಪಿದೆ.

strait of Hormuz
ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್ ಅವರು “ತಕ್ಷಣದಿಂದಲೇ ಅಮೆರಿಕಾ ನೌಕಾಪಡೆ ಹೋರ್ಮುಜ್ ಕಣಿವೆಗೆ ಪ್ರವೇಶಿಸುವ ಅಥವಾ ಹೊರಬರುವ ಹಡಗುಗಳ ಮೇಲೆ ದಿಗ್ಬಂಧನ ಪ್ರಕ್ರಿಯೆಯನ್ನು ಆರಂಭಿಸುತ್ತದೆ” ಎಂದು ಘೋಷಿಸಿದ್ದಾರೆ. ಜೊತೆಗೆ, ಇರಾನ್ ಸಮುದ್ರದಲ್ಲಿ ಅಳವಡಿಸಿದ್ದಾರೆಂದು ಹೇಳಲಾಗುತ್ತಿರುವ ಮೈನ್ಸ್‌ಗಳನ್ನು ನಾಶಪಡಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಅಮೆರಿಕಾ ಅಥವಾ ಹಡಗುಗಳ ಮೇಲೆ ದಾಳಿ ನಡೆದರೆ ತೀವ್ರ ಸೇನಾ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಹೋರ್ಮುಜ್ ಪ್ರದೇಶದಲ್ಲಿ ಈಗಾಗಲೇ ಉದ್ವಿಗ್ನತೆ ಹೆಚ್ಚಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಅನೇಕ ತೈಲ ಸಾಗಣೆ ಹಡಗುಗಳು ಈ ಮಾರ್ಗವನ್ನು ಬಳಸಲು ಹಿಂಜರಿಯುತ್ತಿದ್ದು, ಕೆಲವು ಹಡಗುಗಳು ಮಧ್ಯದಲ್ಲೇ ದಿಕ್ಕು ಬದಲಿಸಿ ಹಿಂದಿರುಗಿವೆ ಎಂದು ತಿಳಿದುಬಂದಿದೆ.

ಜಾಗತಿಕವಾಗಿ ಕಚ್ಚಾ ತೈಲ ಸಾಗಣೆಯ ಸುಮಾರು 20 ಶೇಕಡಾ ಭಾಗ ಈ ಕಣಿವೆಯ ಮೂಲಕವೇ ಸಾಗುವುದರಿಂದ, ಈ ತಡೆಗಟ್ಟುವಿಕೆಯ ಪರಿಣಾಮವಾಗಿ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಇದರಿಂದ ತೈಲ ಬೆಲೆ ಏರಿಕೆ ಭೀತಿ ಹೆಚ್ಚಿದ್ದು, ಭಾರತ ಸೇರಿದಂತೆ ತೈಲ ಆಮದು ಮಾಡುವ ದೇಶಗಳಿಗೆ ಆರ್ಥಿಕ ಒತ್ತಡ ಎದುರಾಗುವ ಸಾಧ್ಯತೆ ಇದೆ.

ಇರಾನ್ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ಅಮೆರಿಕಾ ನೌಕಾಪಡೆ ಯಾವುದೇ ದಾಳಿ ನಡೆಸಿದರೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದೆ.

ಹಾರ್ಮುಜ್ ಪ್ರದೇಶದಲ್ಲಿ ನಮ್ಮ ನಿಯಂತ್ರಣ ಮುಂದುವರಿಯುತ್ತದೆ ಎಂದು ಇರಾನ್ ಹೇಳಿಕೊಂಡಿದೆ. ಇದರಿಂದ ಮಧ್ಯಪೂರ್ವ ಪ್ರದೇಶದಲ್ಲಿ ಮತ್ತೆ ಯುದ್ಧ ಭೀತಿ ತಲೆದೋರಿದೆ.

ಏತನ್ಮಧ್ಯೆ, ಪಾಕಿಸ್ತಾನದ ಮಧ್ಯಸ್ಥಿಕೆಯ ಮಾತುಕತೆಗಳು ಭಾನುವಾರ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳಲ್ಲಿ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ.

ಪುಟಿನ್ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಸಂಪರ್ಕ ಸಾಧಿಸಿ, ಮಧ್ಯಪೂರ್ವದಲ್ಲಿ ಶಾಂತಿ ಸ್ಥಾಪನೆಗಾಗಿ ರಷ್ಯಾ ಸಕ್ರಿಯ ಪಾತ್ರ ವಹಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ. ಸಂಘರ್ಷಕ್ಕೆ ರಾಜಕೀಯ ಮತ್ತು ರಾಜತಾಂತ್ರಿಕ ಪರಿಹಾರ ಕಂಡುಹಿಡಿಯಲು ತಮ್ಮ ದೇಶ ಸಹಕರಿಸಲಿದೆ ಎಂದು ಭರವಸೆ ನೀಡಿದ್ದಾರೆಂದು ಕ್ರೆಮ್ಲಿನ್ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com