'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

ನಾನು ಹಾರ್ಮುಜ್ ಜಲಸಂಧಿಯನ್ನು ಶಾಶ್ವತವಾಗಿ ತೆರೆಯುತ್ತಿರುವುದಕ್ಕೆ ಚೀನಾ ತುಂಬಾ ಸಂತೋಷವಾಗಿದೆ. ನಾನು ಅವರಿಗಾಗಿ ಮತ್ತು ಇಡೀ ಜಗತ್ತಿಗಾಗಿ ನಾನು ಈ ಕೆಲಸ ಮಾಡುತ್ತಿದ್ದೇನೆ.
China and America President
ಚೀನಾ ಅಧ್ಯಕ್ಷ ಕ್ಸಿ-ಜಿನ್ ಪಿಂಗ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Updated on

ವಾಷಿಂಗ್ಟನ್: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಯುದ್ಧ ಆರಂಭಿಸಿದ ಸ್ವಲ್ಪ ಸಮಯದ ನಂತರ ಮುಚ್ಚಲ್ಪಟ್ಟಿರುವ ಹಾರ್ಮುಜ್ ಜಲಸಂಧಿಯನ್ನು"ಚೀನಾ ಮತ್ತು ಇಡೀ ಜಗತ್ತಿಗೆ" ಹಾರ್ಮುಜ್ ಜಲಸಂಧಿಯನ್ನು "ಶಾಶ್ವತವಾಗಿ ತೆರೆಯುತ್ತಿದ್ದೇನೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.

"ನಾನು ಹಾರ್ಮುಜ್ ಜಲಸಂಧಿಯನ್ನು ಶಾಶ್ವತವಾಗಿ ತೆರೆಯುತ್ತಿರುವುದಕ್ಕೆ ಚೀನಾ ತುಂಬಾ ಸಂತೋಷವಾಗಿದೆ. ನಾನು ಅವರಿಗಾಗಿ ಮತ್ತು ಇಡೀ ಜಗತ್ತಿಗಾಗಿ ನಾನು ಈ ಕೆಲಸ ಮಾಡುತ್ತಿದ್ದೇನೆ. ಇಂತಹ ಪರಿಸ್ಥಿತಿ ಮತ್ತೆಂದೂ ಮರಕಳಿಸುವುದಿಲ್ಲ" ಎಂದು ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದಿಲ್ಲ ಎಂದು ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

"ಅವರು ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸದಿರಲು ಒಪ್ಪಿಕೊಂಡಿದ್ದಾರೆ. ನಾನು ಕೆಲವು ವಾರಗಳಲ್ಲಿ ಅಲ್ಲಿಗೆ ಭೇಟಿ ನೀಡಿದಾಗ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ" ಎಂದು ಟ್ರಂಪ್ ಅವರು, ಬೀಜಿಂಗ್‌ನಲ್ಲಿ ಮೇ 14-15 ರಂದು ಕ್ಸಿ ಜೊತೆಗಿನ ತಮ್ಮ ಯೋಜಿತ ಶೃಂಗಸಭೆಯನ್ನು ಉಲ್ಲೇಖಿಸಿ ಹೇಳಿದ್ದಾರೆ.

China and America President
ಚೀನಾ ನಿಜಕ್ಕೂ ಇರಾನ್‌ಗೆ ಮಿಲಿಟರಿ ನೆರವು ನೀಡುತ್ತಿದೆಯೇ?

ಇಂದು ಪ್ರಸಾರವಾದ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಚೀನಾದ ಅಧ್ಯಕ್ಷರು ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.

"ಚೀನಾ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ನೀಡುತ್ತಿದೆ ಎಂಬ ವರದಿಗೆ ಪ್ರತಿಕ್ರಿಯಿಸಿದ ಟ್ರಂಪ್, ನಾನು ಅವರಿಗೆ ಹಾಗೆ ಮಾಡದಂತೆ ಕೇಳಿಕೊಂಡು ಪತ್ರ ಬರೆದೆ ಮತ್ತು ಅವರು ಮೂಲಭೂತವಾಗಿ ಹಾಗೆ ಮಾಡುತ್ತಿಲ್ಲ ಎಂದು ಹೇಳುವ ಪತ್ರವನ್ನು ನನಗೆ ಬರೆದರು" ಎಂದು ತಿಳಿಸಿದ್ದಾರೆ.

ಇದೇ ವೇಳೆ ಇರಾನ್ ವಿರುದ್ಧದ ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂದು ಟ್ರಂಪ್ ಹೇಳಿದ್ದಾರೆ.

ಟ್ರಂಪ್ ಅವರ ಈ ಹೇಳಿಕೆ ಏಳನೇ ವಾರಕ್ಕೆ ಕಾಲಿಟ್ಟಿರುವ ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್ ನಡುವೆ ಎರಡನೇ ಸುತ್ತಿನ ಕದನ ವಿರಾಮ ಮಾತುಕತೆ ನಡೆಯುವ ಸುಳಿವು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com