ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

ಹಾರ್ಮುಜ್ ಜಲಸಂಧಿಯಲ್ಲಿ ಹೇರಲಾಗಿರುವ ನೌಕಾ ದಿಗ್ಬಂಧನವನ್ನು ಹಿಂಪಡೆಯದಿದ್ದರೆ, ಗಲ್ಫ್ ಪ್ರದೇಶದ ವ್ಯಾಪಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುವುದಾಗಿ ಅಮೆರಿಕಾಕ್ಕೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ.
Hormuz
ಹಾರ್ಮುಜ್ ಜಲಸಂಧಿ
Updated on

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತಾರಕ್ಕೇರುತ್ತಲೇ ಇದ್ದು, ಇರಾನ್ ಹಾಗೂ ಅಮೆರಿಕಾ ನಡುವೆ ಮಾತಿನ ಸಮರ ತೀವ್ರಗೊಂಡಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹೇರಲಾಗಿರುವ ನೌಕಾ ದಿಗ್ಬಂಧನವನ್ನು ಹಿಂಪಡೆಯದಿದ್ದರೆ, ಗಲ್ಫ್ ಪ್ರದೇಶದ ವ್ಯಾಪಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುವುದಾಗಿ ಅಮೆರಿಕಾಕ್ಕೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ.

ಇರಾನ್‌ನ ಸಂಯುಕ್ತ ಸೈನಿಕ ಕಮಾಂಡ್ ನಾಯಕತ್ವದಿಂದ ಈ ಎಚ್ಚರಿಕೆ ನೀಡಲಾಗಿದ್ದು, ಇದು ಜಾಗತಿಕ ವ್ಯಾಪಾರ ಹಾಗೂ ಇಂಧನ ಸರಬರಾಜಿನ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯನ್ನು ಹೆಚ್ಚಿಸಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ತೈಲ ಮತ್ತು ಸರಕು ಸಾಗಾಟಕ್ಕೆ ಇದು ನೇರ ಹೊಡೆತ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇದರ ನಡುವೆ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುದ್ಧವು “ಶೀಘ್ರವೇ ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ” ಎಂದು ಹೇಳಿರುವುದು ಪರಿಸ್ಥಿತಿಯಲ್ಲಿನ ವಿರೋಧಾಭಾಸವನ್ನು ತೋರಿಸುತ್ತದೆ.

ಒಂದೆಡೆ ಯುದ್ಧ ವಿರಾಮದ ಮಾತುಕತೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಕಠಿಣ ಹೇಳಿಕೆಗಳು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿವೆ.

ಅದೇ ವೇಳೆ, ಅಮೆರಿಕಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರು, ಇರಾನ್ ಮೇಲೆ ಆರ್ಥಿಕ ಒತ್ತಡವನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧತೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಇರಾನ್ ಜೊತೆ ವ್ಯವಹಾರ ಮಾಡುವ ಹಣಕಾಸು ಸಂಸ್ಥೆಗಳ ಮೇಲೆ ದ್ವಿತೀಯ ನಿರ್ಬಂಧ (secondary sanctions) ವಿಧಿಸುವ ಮೂಲಕ ಇರಾನ್ ಆರ್ಥಿಕತೆ ಮೇಲೆ ಒತ್ತಡ ಹೆಚ್ಚಿರುವುದಾಗಿ ಎಚ್ಚರಿಕೆ ನೀಡಿದ್ದಾರೆ.

Hormuz
Hormuz ಜಲಸಂಧಿಗಾಗಿ ಯುದ್ಧಕ್ಕೆ ಸೌದಿ, ಯುಎಇ ಸಜ್ಜು; ಅಮೆರಿಕ ಜೊತೆ ಇರಾನ್ ವಿರುದ್ಧ ಗಲ್ಫ್ ರಾಷ್ಟ್ರಗಳ ಸಮರ; ಇಸ್ರೇಲ್ ಯೋಜನೆ ಏನು?

ಈ ಎಲ್ಲಾ ಬೆಳವಣಿಗೆ ನಡುವಲ್ಲೂ ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಒಪ್ಪಂದವನ್ನು ವಿಸ್ತರಿಸಲು ರಾಜತಾಂತ್ರಿಕ ಪ್ರಯತ್ನಗಳು ಮುಂದುವರಿದಿದ್ದು, ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ. ಅಮೆರಿಕಾ ಇನ್ನೂ ಅಧಿಕೃತವಾಗಿ ಕದನ ವಿರಾಮ ವಿಸ್ತರಣೆಗೆ ಒಪ್ಪಿಕೊಂಡಿಲ್ಲ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

ಇನ್ನೊಂದೆಡೆ, ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ವಿರುದ್ಧ ತನ್ನ ವಾಯು ಹಾಗೂ ಭೂ ಆಕ್ರಮಣಗಳನ್ನು ಮುಂದುವರೆಸುತ್ತಿದೆ. ದಶಕಗಳ ಬಳಿಕ ನಡೆದ ನೇರ ಮಾತುಕತೆಗಳ ನಡುವೆಯೂ ಈ ಯುದ್ಧ ಚಟುವಟಿಕೆಗಳು ಮುಂದುವರಿಯುತ್ತಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಮಿಲಿಟರಿ ಸಲಹೆಗಾರರಾದ ಮೊಹ್ಸನ್ ರೆಜೈ ಮತ್ತೆ ಅಮೆರಿಕಾಗೆ ನೇರ ಬೆದರಿಕೆ ಹಾಕಿದ್ದಾರೆ.

ಅಮೆರಿಕಾ ಹಾರ್ಮುಜ್ ಜಲಸಂಧಿಯನ್ನು ನಿಯಂತ್ರಿಸಲು ಮುಂದಾದರೆ, ಅವರ ಹಡಗುಗಳನ್ನು ಕ್ಷಿಪಣಿಗಳ ಮೂಲಕ ಹೊಡೆದುರುಳಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಅಮೆರಿಕಾ ಹಡಗುಗಳು ನಮ್ಮ ಕ್ಷಿಪಣಿಗಳಿಗೆ ಸುಲಭ ಗುರಿಯಾಗುತ್ತವೆ, ನಾವು ಅವುಗಳನ್ನು ನಾಶ ಮಾಡಬಹುದು” ಎಂದು ತಿಳಿಸಿದ್ದಾರೆ.

ಒಟ್ಟಾರೆ, ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ದೊಡ್ಡ ಪರಿಣಾಮ ಉಂಟುಮಾಡುವ ಸೂಚನೆ ನೀಡುತ್ತಿವೆ. ವಿಶೇಷವಾಗಿ ತೈಲ ಸರಬರಾಜು, ಸಾಗಾಟ ಮಾರ್ಗಗಳು ಮತ್ತು ಅಂತರರಾಷ್ಟ್ರೀಯ ವ್ಯಾಪಾರಕ್ಕೆ ದೊಡ್ಡ ಹೊಡೆತ ಬೀಳುವ ಭೀತಿ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com