ಕೀವ್ ನ ಸೂಪರ್‌ ಮಾರ್ಕೆಟ್‌ನಲ್ಲಿ ಅಪರಿಚಿತನಿಂದ ಗುಂಡಿನ ದಾಳಿ: ಆರು ಮಂದಿ ಬಲಿ!

ನಾಗರಿಕರ ಮೇಲೆ ಗುಂಡು ಹಾರಿಸಿದ ದಾಳಿಕೋರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದು, ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ಕೀವ್: ಉಕ್ರೇನ್ ದೇಶದ ರಾಜಧಾನಿ ಕೀವ್ ನ ಸೂಪರ್ ಮಾರ್ಕೆಟ್ ನಲ್ಲಿ ಅಪರಿಚಿತ ಬಂದೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗುಂಡಿನ ದಾಳಿಯ ನಂತರ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಾಗರಿಕರ ಮೇಲೆ ಗುಂಡು ಹಾರಿಸಿದ ದಾಳಿಕೋರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದು, ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

UNIAN ಸುದ್ದಿ ಸಂಸ್ಥೆ ಪೋಸ್ಟ್ ಮಾಡಿದ ದೃಶ್ಯಗಳಲ್ಲಿ, ಒಬ್ಬ ವ್ಯಕ್ತಿ ಬಂದೂಕನ್ನು ಹಿಡಿದು ಫ್ಲಾಟ್‌ಗಳ ಬ್ಲಾಕ್ ಬಳಿ ವ್ಯಕ್ತಿಯ ಮೇಲೆ ಗುಂಡು ಹಾರಿಸುತ್ತಿರುವುದನ್ನು ತೋರಿಸಿದೆ. ಶಂಕಿತ ನಂತರ ಸೂಪರ್‌ಮಾರ್ಕೆಟ್‌ಗೆ ಪ್ರವೇಶಿಸಿದನು, ಅಲ್ಲಿ ಗುಂಡೇಟಿನ ಶಬ್ದಗಳು ಕೇಳಿಬಂದಿತು ಎಂದು ಕೈವ್ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ. ನಾಲ್ವರು ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ" ಎಂದು ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Casual Images
ಪೋಲೆಂಡ್ ಪ್ರವಾಸ ಮುಗಿಸಿ ಉಕ್ರೇನ್ ಗೆ ಪ್ರಧಾನಿ ಮೋದಿ ಆಗಮನ: ಇಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ

ನಗರದ ದಕ್ಷಿಣದಲ್ಲಿರುವ ಹೊಲೊಸಿವ್ಸ್ಕಿ ಜಿಲ್ಲೆಯಲ್ಲಿ ನಡೆದ ಘಟನಾ ಸ್ಥಳದಲ್ಲಿ ವಿಶೇಷ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಉಕ್ರೇನ್ ಪೊಲೀಸರು ತಿಳಿಸಿದ್ದಾರೆ. ದಾಳಿಕೋರನ ಉದ್ದೇಶ ತಿಳಿದಿಲ್ಲ . ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com